ಶನಿವಾರ, ಸೆಪ್ಟೆಂಬರ್ 25, 2021
24 °C

ಮೇಕೆದಾಟು ಯೋಜನೆ: ತಮಿಳುನಾಡಿನ ರಾಜಕಾರಣ ಸರಿಯಲ್ಲ -ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಮೇಕೆದಾಟು ಯೋಜನೆಯ ವಿಸ್ತೃತ ಯೋಜನಾ ವರದಿ ಸಿದ್ಧವಾಗಿದೆ. ಈ ವಿಚಾರದಲ್ಲಿ ತಮಿಳುನಾಡು ಮಾಡುತ್ತಿರುವ ರಾಜಕಾರಣ ಸರಿಯಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದರು.

ಕಾವೇರಿ ನದಿ ನೀರಿನ ವಿಚಾರವನ್ನು ರಾಜಕಾರಣಕ್ಕೆ ಬಳಕೆ  ಮಾಡಿಕೊಂಡು ರಾಜಕೀಯ ಪಕ್ಷಗಳು ಅಧಿಕಾರಕ್ಕೆ ಏರಿದ ಉದಾಹರಣೆಗಳು ತಮಿಳುನಾಡಿನಲ್ಲಿದೆ. ಈಗಲೂ ಇಂತಹ ರಾಜಕಾರಣ ಮುಂದುವರಿದಿವೆ. ರಾಜಕಾರಣಕ್ಕಿಂತ ಜನರ ಕಲ್ಯಾಣ ಮುಖ್ಯ ಎಂದು ಇಲ್ಲಿ ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.

ಮೇಕೆದಾಟು ವಿಚಾರದಲ್ಲಿ ಮತ್ತೊಮ್ಮೆ ದೆಹಲಿಗೆ ತೆರಳಿ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದರು.

ಬಿ.ಎಸ್.ಯಡಿಯೂರಪ್ಪ ತಮಗೆ ಸಂಪುಟ ದರ್ಜೆ ಸ್ಥಾನಮಾನ ಬೇಡ ಎಂದು ಹೇಳಿರುವುದರಿಂದ ಅವರಿಗೆ ನಿಕಟಪೂರ್ವ ಮುಖ್ಯಮಂತ್ರಿಯ ಸ್ಥಾನಮಾನವನ್ನಷ್ಟೇ ನೀಡಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಆನಂದ್ ಸಿಂಗ್ ಅವರೊಂದಿಗೆ ಮೊದಲ ಸುತ್ತಿನ ಮಾತುಕತೆ ನಡೆಸಿದ್ದೇನೆ. ಮತ್ತೊಮ್ಮೆ ಕರೆದು ಮಾತನಾಡುತ್ತೇನೆ. ಶಾಸಕ ರಾಮದಾಸ್ ಆತ್ಮೀಯ ಸ್ನೇಹಿತರು. ಅವರೊಂದಿಗೂ ಮಾತನಾಡುತ್ತೇನೆ. ಪಕ್ಷದಲ್ಲಿ ಸಣ್ಣಪುಟ್ಟ ಅಸಮಾಧಾನಗಳಷ್ಟೇ ಇದ್ದು ಅವುಗಳನ್ನು ಬಗೆಹರಿಸಲು ಪ್ರಯತ್ನಪಡುತ್ತಿದ್ದೇನೆ ಎಂದರು.

ಚಾಮುಂಡೇಶ್ವರಿ ದರ್ಶನ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪೂರ್ಣಕುಂಭ ಸ್ವಾಗತ ಕೋರಲಾಯಿತು.ಚಾಮುಂಡಿಬೆಟ್ಟದಲ್ಲಿನ ಚಾಮುಂಡೇಶ್ವರಿ ದೇವಿ ದರ್ಶನ ಮಾಡಿದ ಅವರೊಂದಿಗೆ ಸಂಪುಟ ಸಚಿವರಾದ ಎಸ್.ಟಿ.ಸೋಮಶೇಖರ್, ವಿ.ಸೋಮಣ್ಣ, ಮುರುಗೇಶ್ ನಿರಾಣಿ, ಬೈರತಿ ಬಸವರಾಜು, ಡಾ. ಕೆ.ಸುಧಾಕರ್, ಕೆ.ಸಿ.ನಾರಾಯಣಗೌಡ ಶಾಸಕರಾದ ಜಿ.ಟಿ.ದೇವೇಗೌಡ, ಎಲ್. ನಾಗೇಂದ್ರ, ರೇಣುಕಾಚಾರ್ಯ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು