ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುರುಘಾ ಶರಣರ ವಿರುದ್ಧದ ಪ್ರಕರಣ: ತನಿಖೆ ನಂತರ ಸತ್ಯಾಂಶ ತಿಳಿಯಲಿದೆ ಎಂದ ಬೊಮ್ಮಾಯಿ

Last Updated 28 ಆಗಸ್ಟ್ 2022, 7:10 IST
ಅಕ್ಷರ ಗಾತ್ರ

ಬೆಂಗಳೂರು: ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಪೋಕ್ಸೊ ಕಾಯ್ದೆಯಡಿ ದಾಖಲಾಗಿರುವ ಪ್ರಕರಣದ ಸತ್ಯಾಂಶ ತನಿಖೆಯ ನಂತರ ಹೊರಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರ ಜತೆ ಭಾನುವಾರ ಮಾತನಾಡಿದ ಅವರು, ಈ ಪ್ರಕರಣದ ತನಿಖೆಯಲ್ಲಿ ಪೊಲೀಸರು ಸಂಪೂರ್ಣ ಸ್ವತಂತ್ರರು. ತನಿಖೆಯ ಬಳಿಕ ಸತ್ಯ ಏನೆಂಬುದು ಹೊರಬರಲಿದೆ ಎಂದರು.

ಇದೊಂದು ಪ್ರಮುಖ ಪ್ರಕರಣ. ಪೋಕ್ಸೊ ಪ್ರಕರಣ ದಾಖಲಾಗುವುದರ ಜತೆಯಲ್ಲೇ ಚಿತ್ರದುರ್ಗದಲ್ಲಿ ಅಪಹರಣ ಪ್ರಕರಣವೂ ದಾಖಲಾಗಿದೆ. ಎರಡೂ ಪ್ರಕರಣಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ನಾವು ಪ್ರಕರಣದ ಕುರಿತು ಮಾತನಾಡುವುದು, ವ್ಯಾಖ್ಯಾನ ಮಾಡುವುದು ತನಿಖೆಯ ದೃಷ್ಟಿಯಿಂದ ಸರಿಯಲ್ಲ ಎಂದು ಹೇಳಿದರು.

ಜಿಲ್ಲಾಧಿಕಾರಿಗಳ ಜತೆ ಚರ್ಚೆ: ರಾಜ್ಯದಲ್ಲಿ ಮಳೆಯಿಂದ ಅತಿಹೆಚ್ಚು ಹಾನಿಯಾಗಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಸಂಜೆ ಚರ್ಚೆ ನಡೆಸುತ್ತೇನೆ. ಆ ಬಳಿಕ ಹೆಚ್ಚಿನ ಪರಿಹಾರ ನೀಡುವ ಕುರಿತು ತೀರ್ಮಾನಕ್ಕೆ ಬರಲಾಗುವುದು ಎಂದರು.

ಚಾಮರಾಜಪೇಟೆಯ ಈದ್ಗಾ ಮೈದಾನದ ವಿಚಾರದಲ್ಲಿ ಗೊಂದಲವೇನೂ ಇಲ್ಲ. ಗಣೇಶೋತ್ಸವ ಆಚರಣೆ ಕುರಿತು ಕಂದಾಯ ಸಚಿವರು ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿದ್ದಾರೆ. ಅರ್ಜಿಗಳ ಪರಿಶೀಲನೆಯೂ ನಡೆಯುತ್ತಿದೆ. ಈ ಪ್ರಕ್ರಿಯೆ ಮುಗಿದ ತಕ್ಷಣ ನಿರ್ಣಯ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT