ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಸ್ಐ ನೇಮಕಾತಿಗೆ ಮರು ಪರೀಕ್ಷೆ: ಸಿಎಂ ಬೊಮ್ಮಾಯಿ

Last Updated 29 ಏಪ್ರಿಲ್ 2022, 10:57 IST
ಅಕ್ಷರ ಗಾತ್ರ

ಭೀಮಸಮುದ್ರ (ಚಿತ್ರದುರ್ಗ): 545 ಪಿಎಸ್ಐ ಹುದ್ದೆ ನೇಮಕಾತಿಗೆ ಮರುಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ನೇಮಕಾತಿಗೆ ಸಂಬಂಧಿಸಿದ ನೋಟಿಫಿಕೇಷನ್ ರದ್ದುಪಡಿಸುವುದಿಲ್ಲ. ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಮಾತ್ರ ಮರು ಪರೀಕ್ಷೆ ನೀಡಲಾಗುವುದು. ಹೊಸ ಅಭ್ಯರ್ಥಿಗಳಿಗೆ ಅವಕಾಶವಿಲ್ಲ. ಅಕ್ರಮದ ವ್ಯಾಪಕತೆ ಪರಿಶೀಸಿ ಈ ತೀರ್ಮಾನ ಕೈಗೊಳ್ಳಲಾಗಿದೆ' ಎಂದು ಹೇಳಿದರು.

'ಎಡಿಜಿಪಿ ಅಮೃತ್ ಪೌಲ್ ಕಳಂಕಿತರಲ್ಲ.ಆಡಳಿತಾತ್ಮಕ ದೃಷ್ಟಿಯಿಂದ ವರ್ಗಾವಣೆ ಮಾಡಲಾಗಿದೆ. ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ಭಾಷಾ ವಿಚಾರದಲ್ಲೂ ರಾಜಕಾರಣ ಮಾಡುತ್ತಿದ್ದಾರೆ' ಎಂದು ಕಿಡಿಕಾರಿದರು.

'ರಾಗಿ ಖರೀದಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪಿಯುಷ್ ಗೋಯಲ್ ಅವರೊಂದಿಗೆ ಮಾತನಾಡಿದ್ದೇನೆ. ಹೆಚ್ಚುವರಿ ರಾಗಿ ಖರೀದಿಗೆ ತಾತ್ವಿಕ ಒಪ್ಪಿಗೆ ಸಿಕ್ಕಿದೆ. ದೆಹಲಿಗೆ ತೆರಳಿ ಸಚಿವರೊಂದಿಗೆ ಚರ್ಚೆ ಮಾಡಲಾಗುವುದು. ಕೆಲವೇ ದಿನಗಳಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು' ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT