ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

9ರಿಂದ 12 ತರಗತಿಗೆ ಶಾಲೆ, ಕಾಲೇಜು ಆರಂಭ: ಮಲ್ಲೇಶ್ವರಂ ಪಿಯು ಕಾಲೇಜಿಗೆ ಸಿಎಂ ಭೇಟಿ

Last Updated 23 ಆಗಸ್ಟ್ 2021, 5:47 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಾದ್ಯಂತ ಕೋವಿಡ್‌ ದೃಢ ಪ್ರಮಾಣ ಶೇ 2ಕ್ಕಿಂತ ಹೆಚ್ಚು ಇರುವ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳ ಶಾಲಾ- ಕಾಲೇಜುಗಳಲ್ಲಿ 9ರಿಂದ 12ರವರೆಗಿನ ಭೌತಿಕ ತರಗತಿಗಳು ಸೋಮವಾರ ಆರಂಭಗೊಂಡಿದೆ. ನಗರದ ಮಲ್ಲೇಶ್ವರ ಬಡಾವಣೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿದರು.

ಕಾಲೇಜಿನಲ್ಲಿ ಭೌತಿಕ ತರಗತಿಗಳು ನಡೆಯುತ್ತಿದ್ದ ಕಾಲೇಜಿನ ಕೊಠಡಿಗಳಿಗೆ ಮುಖ್ಯಮಂತ್ರಿ ಭೇಟಿ ನೀಡಿದರು. ಕೋವಿಡ್ ನಿಯಂತ್ರಣ ಹಿನ್ನೆಲೆಯಲ್ಲಿ ಕಾಲೇಜಿನಲ್ಲಿ ಕೈಗೊಂಡಿರುವ ಸಿದ್ಧತೆಗಳನ್ನು ಅವರು ಪರಿಶೀಲಿಸಿದರು. ಅಲ್ಲದೆ, ವಿದ್ಯಾರ್ಥಿಗಳ ಜೊತೆ ಮಾತನಾಡಿದ ಅವರು, ‘ಯಾವುದೇ ಆತಂಕ ಇಲ್ಲದೆ ಕಾಲೇಜಿಗೆ ಬನ್ನಿ’ ಎಂದು ಆಹ್ವಾನ ನೀಡಿದರು.‌

ಕಾಲೇಜು ಆವರಣದಲ್ಲಿ ಮುಖ್ಯಮಂತ್ರಿ ಸಸಿ ನೆಟ್ಟು‌ ನೀರು ಹಾಕಿದರು. ಅಶ್ವತ್ಥನಾರಾಯಣ ಫೌಂಡೇಷನ್ ವತಿಯಿಂದ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸಿದರು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ, ಬಿ ಸಿ ನಾಗೇಶ್, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥ ನಾರಾಯಣ ಇದ್ದರು.

ಬಳಿಕ, ಮಲ್ಲೇಶ್ವರಂ ಬಡಾವಣೆಯ ನಿರ್ಮಲಾರಾಣಿ ಪ್ರೌಢಶಾಲೆಗೆ ಮುಖ್ಯಮಂತ್ರಿ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ವಿದ್ಯಾರ್ಥಿಗಳು ಶಾಲೆಗೆ ಬರುವುದರಿಂದ ಕಲಿಕಾ ಕ್ರಮದಲ್ಲಿ ಆಗುವ ಬದಲಾವಣೆಗಳ ಕುರಿತು ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದರು.

ಕೋವಿಡ್‌ ದೃಢ ಪ್ರಮಾಣ ಶೇ 2ಕ್ಕಿಂತ ಹೆಚ್ಚು ಇರುವ ದಕ್ಷಿಣ ಕನ್ನಡ, ಕೊಡಗು, ಉಡುಪಿ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಶಾಲಾ– ಕಾಲೇಜು ಆರಂಭಗೊಂಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT