ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಂಬಿದ ಕೃಷ್ಣೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಬಾಗಿನ ಸಮರ್ಪಣೆ

Last Updated 25 ಆಗಸ್ಟ್ 2020, 8:35 IST
ಅಕ್ಷರ ಗಾತ್ರ

ವಿಜಯಪುರ: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಅಲಮಟ್ಟಿ ಜಲಾಶಯಕ್ಕೆ ಮಂಗಳವಾರ ಬಾಗಿನ ಸಮರ್ಪಿಸಿದರು.

ಉಪ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ, ಕಂದಾಯ ಸಚಿವ ಆರ್‌.ಅಶೋಕ್‌, ವಿಧಾನ ಪರಿಷತ್‌ ವಿರೋಧಪಕ್ಷದ ನಾಯಕ ಎಸ್‌.ಆರ್.ಪಾಟೀಲ, ಶಾಸಕರಾದ ಮುರುಗೇಶ ನಿರಾಣಿ, ಸಿದ್ದು ಸವದಿ, ಎ.ಎಸ್‌.ಪಾಟೀಲ ನಡಹಳ್ಳಿ, ವೀರಣ್ಣ ಚರಂತಿಮಠ, ದೊಡ್ಡನಗೌಡ ಪಾಟೀಲ, ಸಂಸದ ಶಿವಕುಮಾರ್‌ ಉದಾಸಿ ಇದ್ದರು.

ಬಾಗಿನ ಅರ್ಪಿಸುವುದಕ್ಕೂ ಮುನ್ನಾ ಯಡಿಯೂರಪ್ಪ ಅವರು ಹೆಲಿಕಾಪ್ಟರ್‌ ನಲ್ಲಿ ಬಾಗಲಕೋಟೆ, ಬೆಳಗಾವಿ ಮತ್ತು ವಿಜಯಪುರ ಜಿಲ್ಲಾ ವ್ಯಾಪ್ತಿಯಲ್ಲಿ ಕೃಷ್ಣಾ, ಘಟಪ್ರಭಾ ಮತ್ತು ಮಲಪ್ರಭಾ ನದಿಗಳ ಪ್ರವಾಹದಿಂದ ಬಾಧಿತವಾದ ಪ್ರದೇಶಗಳನ್ನು ವೈಮಾನಿಕ ಸಮೀಕ್ಷೆ ನಡೆಸಿದರು.

ಆಲಮಟ್ಟಿ ಕೆಬಿಜಿಎನ್‌ಎಲ್‌ ಸಭಾಂಗಣದಲ್ಲಿ ಮೂರು ಜಿಲ್ಲೆಗಳ ಅಧಿಕಾರಿಗಳು, ಸಚಿವರು, ಶಾಸಕರು ಹಾಗೂ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಆಲಮಟ್ಟಿಗೆ ಭೇಟಿ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಕೋವಿಡ್‌ ಹಿನ್ನೆಲೆಯಲ್ಲಿ ಸಭೆಗೆ ಪ್ರತಿಯೊಬ್ಬರ ಆರೋಗ್ಯ ತಪಾಸಣೆ ಮಾಡಿ ಒಳಬಿಡಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT