ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇದೇ 18ರಿಂದ ಮೂರು ದಿನ ಶಿಕಾರಿಪುರಕ್ಕೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಬಿಎಸ್‌ವೈ

Last Updated 15 ಅಕ್ಟೋಬರ್ 2020, 15:44 IST
ಅಕ್ಷರ ಗಾತ್ರ

ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅ.18ರಿಂದ ಮೂರು ದಿನ ಶಿಕಾರಿಪುರಕ್ಕೆ ಭೇಟಿ ನೀಡುತ್ತಿದ್ದಾರೆ.

18ರಂದು ಮಧ್ಯಾಹ್ನ ಬೆಂಗಳೂರಿನಿಂದ ಹೊರಡುವ ಮುಖ್ಯಮಂತ್ರಿ ಸಂಜೆ 4ಕ್ಕೆ ಶಿಕಾರಿಪುರ ಹೆಲಿಪ್ಯಾಡ್‌ಗೆ ತಲುಪುವರು. ನಂತರ ತಮ್ಮ ಮನೆಯಲ್ಲೇ ತಂಗುವರು. 19ರಂದು 11ಕ್ಕೆ ಕಲ್ಲುವಡ್ಡು ಏತನೀರಾವರಿ ಯೋಜನೆಗೆ ಶಂಕು ಸ್ಥಾಪನೆ ನೆರವೇರಿಸುವರು. ಉಡುತಡಿ ಅಕ್ಕಮಹಾದೇವಿ ಜನ್ಮಸ್ಥಳದ ಅಭಿವೃದ್ಧಿ ಕಾಮಗಾರಿ ವೀಕ್ಷಿಸುವರು. ನಂತರ ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ಹಮ್ಮಿಕೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.

20ರಂದು ಬೆಳಿಗ್ಗೆ 10ಕ್ಕೆ ಸಾಂಸ್ಕೃತಿಕ ಭವನದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಸವಲತ್ತು ವಿತರಿಸವರು. ಅಂದು ಮಧ್ಯಾಹ್ನ 2.30ಕ್ಕೆ ಹೆಲಿಕಾಪ್ಟರ್ ಮೂಲಕ ಬೆಂಗಳೂರು ತಲುಪುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT