ಬುಧವಾರ, ಅಕ್ಟೋಬರ್ 5, 2022
27 °C

ಮುಖ್ಯಮಂತ್ರಿ ಬದಲಾವಣೆ ಸಾಧ್ಯತೆ: ಬಿಜೆಪಿ ಮಾಜಿ ಶಾಸಕ ಸುರೇಶ್‌ಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬದಲಾವಣೆ ಮಾಡುವ ಸಾಧ್ಯತೆಗಳಿವೆ. ಈ ಬಗ್ಗೆ ವರಿಷ್ಠರು ಚಿಂತನೆ ನಡೆಸಿದ್ದಾರೆ ಎಂದು ಬಿಜೆಪಿ ಮಾಜಿ ಶಾಸಕ ಸುರೇಶ್‌ಗೌಡ ಸೋಮವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ‘ಸ್ವಾತಂತ್ರ್ಯ ದಿನೋತ್ಸವಕ್ಕೂ ಮೊದಲೇ ಮುಖ್ಯಮಂತ್ರಿ ಬದಲಾವಣೆ ಆಗಬಹುದು. ಈ ಬಗ್ಗೆ ಪಕ್ಷದಲ್ಲಿ ಚರ್ಚೆಗಳು ನಡೆದಿವೆ. ಬೊಮ್ಮಾಯಿ ಅವರು ತಮ್ಮ ಒಂದು ವರ್ಷದ ಅವಧಿಯಲ್ಲಿ ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಆದರೂ ವರಿಷ್ಠರು ಬದಲಾವಣೆ ಮಾಡಬಹುದು. ಹೈಕಮಾಂಡ್ ನಿರ್ಧಾರಕ್ಕೆ ಬದ್ಧ’ ಎಂದರು.

‘ಕೆಲವು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಎಂಟತ್ತು ತಿಂಗಳು ಇದ್ದ ಸಮಯದಲ್ಲೂ ಮುಖ್ಯಮಂತ್ರಿ ಬದಲಾವಣೆ ಮಾಡಲಾಗಿದೆ. ರಾಜ್ಯದಲ್ಲೂ ಚುನಾವಣೆಗೆ ಮುನ್ನ ಬದಲಾವಣೆ ಮಾಡಲು ವರಿಷ್ಠರು ಮುಂದಾಗಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮುಖ್ಯಮಂತ್ರಿ ಆಗಲಿದ್ದಾರೆ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಈ ವಿಚಾರ ನನಗೆ ಗೊತ್ತಿಲ್ಲ. ಅವರು ಹೇಳಿಲ್ಲ. ಶೋಭಾ ಮುಖ್ಯಮಂತ್ರಿಯಾದರೆ ಸಂತೋಷ’ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು