ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವರ್ಗಾವಣೆ

Last Updated 31 ಆಗಸ್ಟ್ 2020, 11:54 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ಅವರನ್ನು ಆ ಹುದ್ದೆಯಿಂದ ತೆರವುಗೊಳಿಸಿ, ಆ ಸ್ಥಾನಕ್ಕೆ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ. ರಮಣ ರೆಡ್ಡಿ ಅವರನ್ನು ನೇಮಿಸಲಾಗಿದೆ.

ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಎಚ್‌.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಅವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಇ.ವಿ. ರಮಣರೆಡ್ಡಿ ಕೆಲಸ ಮಾಡಿದ್ದರು.

ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನೂ ರಮಣ ರೆಡ್ಡಿ ನಿಭಾಯಿಸಲಿದ್ದಾರೆ.

ರೆಡ್ಡಿ ಅವರನ್ನು ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ತೆರವುಗೊಳಿಸಿ, ಆ ಸ್ಥಾನಕ್ಕೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಿ. ಕುಮಾರ ನಾಯ್ಕ್ ಅವರನ್ನು ನೇಮಿಸಲಾಗಿದೆ. ಈಗಿರುವ ಹುದ್ದೆಯ ಜೊತೆಗೇ ಹೊಸ ಹುದ್ದೆಯನ್ನು ನಾಯ್ಕ್‌ ಅವರಿಗೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT