ಗುರುವಾರ , ಏಪ್ರಿಲ್ 15, 2021
24 °C

ಮಧ್ಯಾಹ್ನ 12 ರಿಂದ ಬೆಳಿಗ್ಗೆ 6 ರವರೆಗೆ ಬೆಂಗಳೂರಲ್ಲಿ ನಿಷೇಧಾಜ್ಞೆ: ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಗುರುವಾರ ಮಧ್ಯಾಹ್ನ 12 ಗಂಟೆಯಿಂದ ಬೆಳಿಗ್ಗೆ 6 ಗಂಟೆ ವರೆಗೆ ಬೆಂಗಳೂರಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಹೊಸ ಮಾದರಿಯ ಬ್ರಿಟನ್ ಕೊರೋನಾ ವೈರಸ್ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಈ ರೀತಿಯ ಎಚ್ಚರಿಕೆ ಕ್ರಮ ಕೈಗೊಳ್ಳಲಾಗಿದ್ದು, ನಿಷೇಧಾಜ್ಞೆ ವೇಳೆ ಜನರು ಸಹಕರಿಸಬೇಕು. ಎಲ್ಲರೂ ಕೋವಿಡ್‌ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು. ಆರೋಗ್ಯದ ದೃಷ್ಟಿಯಿಂದ ನಿಷೇಧಾಜ್ಙೆ ಜಾರಿ ಮಾಡಲಾಗಿದ್ದು, ಇವತ್ತು ಒಂದು ದಿನ ಪಾಲಿಸಿ ಎಂದು ಮನವಿ ಮಾಡಿದ್ದಾರೆ. 

ಇದೇವೇಳೆ, ರಾಜ್ಯದ ಜನರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ.

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ 3,800ಕ್ಕೂ ಅಧಿಕ ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆದ್ದಿದ್ದಾರೆ. ಇದು ಉಸ್ತುವಾರಿ ಸಚಿವರು, ಶಾಸಕರ ಸಾಮೂಹಿಕ ನಾಯಕತ್ವದ ಶ್ರಮದಿಂದಾಗಿದೆ. ಶೇ. 60ರಷ್ಟು ಗ್ರಾಮ ಪಂಚಾಯಿತಿ ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿದೆ ಎಂದು ಹೇಳಿದ್ದಾರೆ.

ಪರಿಷ್ಕೃತ ಆದೇಶ

ಹೊಸ ವರ್ಷಾಚರಣೆ ದಿನವಾದ ಡಿ. 31ರಂದು ಸಂಜೆಯಿಂದ ಜ. 1ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಎಂದಿದ್ದ ನಗರದ ಪೊಲೀಸ್ ಕಮಿಷನರ್ ಕಮಲ್ ಪಂತ್, ಪರಿಷ್ಕೃತ ಆದೇಶ ಹೊರಡಿಸಿ ಡಿ. 31ರ ಮಧ್ಯಾಹ್ನ 12ರಿಂದಲೇ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

‘ಕೊರೊನಾ ರೂಪಾಂತರಿ ಸೋಂಕು ಪ್ರಕರಣಗಳು ನಗರದಲ್ಲಿ ಕಂಡುಬಂದಿವೆ. ಅದು ಹರಡದಂತೆ ಕ್ರಮ ಕೈಗೊಳ್ಳಲಾಗಿದ್ದು, ಇದೇ ಕಾರಣಕ್ಕೆ ನಿಷೇಧಾಜ್ಞೆ ಆದೇಶವನ್ನು ಪರಿಷ್ಕರಿಸಲಾಗಿದೆ. ಸಮಯ ಮಾತ್ರ ಬದಲಾಗಿದ್ದು, ಉಳಿದೆಲ್ಲ ಅಂಶಗಳು ಮೊದಲಿನ ರೀತಿಯಲ್ಲೇ ಇರಲಿವೆ’ ಎಂದು ಕಮಿಷನರ್ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು