ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಕುಮಾರ ಶ್ರೀ ಪುಣ್ಯಸ್ಮರಣೆ; ದಾಸೋಹ ದಿನವಾಗಿ ಘೋಷಣೆ

Last Updated 21 ಜನವರಿ 2021, 8:40 IST
ಅಕ್ಷರ ಗಾತ್ರ

ತುಮಕೂರು: ನಾನು ಶಿವಕುಮಾರ ಸ್ವಾಮೀಜಿಯವರನ್ನು ಭೇಟಿ ಆದಾಗ ನನ್ನ ಅವರ ಕೊಠಡಿಗೆ ಕರೆದುಕೊಂಡು ಹೋಗಿ ಸಲಹೆಗಳನ್ನು ಕೊಡುತ್ತಿದ್ದರು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಮರಿಸಿದರು.

ಶಿವಕುಮಾರ ಸ್ವಾಮೀಜಿ ಅವರ ಎರಡನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,ಶ್ರೀಗಳುಯುಗಪುರುಷ ಬಸವಣ್ಣ ಅವರ ಕಾಯಕ ಮತ್ತು ದಾಸೋಹ ತತ್ವದಲ್ಲಿ ಪೂರ್ಣವಾಗಿ ತೊಡಗಿಸಿಕೊಂಡಿದ್ದರು. ಅನ್ನ ಅರಿವು ದಾಸೋಹದ ಜತೆಗೆ ಶಿಕ್ಷಣ ಅಧ್ಯಾತ್ಮದಲ್ಲೂ ಬದುಕು ಸವೆಸಿದರು. ಎಲ್ಲ ಜಾತಿ ಧರ್ಮಗಳ ಜನರಿಗೂ ಶಿಕ್ಷಣ ಆಶ್ರಯ ನೀಡಿದರು. ಇಲ್ಲಿ ಕಲಿತವರು ದೇಶ ವಿದೇಶಗಳಲ್ಲಿ ಉನ್ನತ ಸ್ಥಾನ ಪಡೆದಿದ್ದಾರೆ ಎಂದು ಪ್ರಶಂಸಿಸಿದರು.

ಜೀವನದಲ್ಲಿ ನೀನು ಒಬ್ಬನೇ ಸಾಧಿಸಿ ಮೇಲೆ ಬರುವುದಕ್ಕಿಂತ 10 ಜನರನ್ನು ಮೇಲೆತ್ತು ಎಂದ ಸ್ವಾಮೀಜಿ ಅವರ ಮಾತು ಮತ್ತು ನಡೆ ಲಕ್ಷಾಂತರ ವಿದ್ಯಾರ್ಥಿಗಳಿಗೆ ಬದುಕು ಕಟ್ಟಿಕೊಟ್ಟಿದೆ. ಸ್ವಾಮೀಜಿ ಭೌತಿಕವಾಗಿ ಇಲ್ಲ ಅಷ್ಟೇ. ಅವರ ಕೆಲಸ ಜೀವಂತ. ಸಿದ್ಧಲಿಂಗ ಸ್ವಾಮೀಜಿ ಅವರೂ ಶಿವಕುಮಾರ ಸ್ವಾಮೀಜಿ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಮ್ಮನ್ನು ಮುನ್ನಡೆಸುತ್ತಿದ್ದಾರೆ ಎಂದು ಹೇಳಿದರು.

ವೀರಾಪುರ ಅಭಿವೃದ್ಧಿ ಗೆ ಈಗಾಗಲೇ ಸರ್ಕಾರ‌ ₹ 25 ಕೋಟಿ ಬಿಡುಗಡೆ ಮಾಡಿದೆ. ಒಟ್ಟು ₹ 80 ಕೋಟಿಯ ಯೋಜನೆ ಇದು ಎಂದರು.

ಶಿವಕುಮಾರ ಸ್ವಾಮೀಜಿ ವಸ್ತುಸಂಗ್ರಹಾಲಯಕ್ಕೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ಮಾಡಿದ್ದರು. ಅದಕ್ಕೆ ₹ 10 ಕೋಟಿ ಬೇಕಿದೆ. ಅದನ್ನು ಬಿಡುಗಡೆ ಮಾಡುವೆ ಎಂದು ಭರವಸೆ ನೀಡಿದರು.

ಶಿವಕುಮಾರ ಸ್ವಾಮೀಜಿ ಅವರ ಪುಣ್ಯಸ್ಮರಣೆ ದಿ‌ನ ದಾಸೋಹ ದಿನವನ್ನಾಗಿ ಸರ್ಕಾರ ಘೋಷಿಸಲಿದೆ ಎಂದರು.

ನನ್ನ ದಿನಚರಿ ಆರಂಭದ ಆಗುವುದೇ ಶಿವಕುಮಾರ ಸ್ವಾಮೀಜಿ ಅವರ ಸ್ಮರಣೆಯೊಂದಿಗೆ ಎಂದು ನುಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT