ಶಿವಮೊಗ್ಗದ ಹುಣಸೋಡು ಬಳಿ ನಿನ್ನೆ ರಾತ್ರಿ ಸಂಭವಿಸಿದ ಭಾರೀ ಅನಾಹುತದಲ್ಲಿ ಅನೇಕ ಮಂದಿ ಸಾವನ್ನಪ್ಪಿದ್ದ ಸುದ್ದಿ ತೀವ್ರ ಆಘಾತಕಾರಿ ಹಾಗೂ ದುರದೃಷ್ಟಕರ. ಹಿರಿಯ ಅಧಿಕಾರಿಗಳೊಂದಿಗೆ ನಿನ್ನೆ ತಡರಾತ್ರಿಯಿಂದಲೇ ಸಂಪರ್ಕದಲ್ಲಿದ್ದು, ಅಗತ್ಯ ರಕ್ಷಣಾ ಕಾರ್ಯಾಚರಣೆಗೆ ತಂಡಗಳನ್ನು ಈಗಾಗಲೇ ರವಾನಿಸಲಾಗಿದೆ. (1/2)
ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಅವರ ಕುಟುಂಬದವರಲ್ಲಿ ತೀವ್ರ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರೆಲ್ಲರೂ ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಈ ದುರ್ಘಟನೆಯ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ. (2/2)