ಶನಿವಾರ, ಜುಲೈ 24, 2021
21 °C

ಇದೇ 25ರಂದು ಶಾಸಕರಿಗೆ ಸಿಎಂ ಯಡಿಯೂರಪ್ಪ ಏರ್ಪಡಿಸಿದ್ದ ಭೋಜನ ಕೂಟ ರದ್ದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಜೆಪಿ ಸರ್ಕಾರಕ್ಕೆ ಎರಡು ವರ್ಷ ತುಂಬಿದ್ದರಿಂದ ಇದೇ 25 ರಂದು ಶಾಸಕರಿಗೆ  ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಏರ್ಪಡಿಸಿದ್ದ ಭೋಜನ ಕೂಟವನ್ನು ರದ್ದುಪಡಿಸಲಾಗಿದೆ.

ಮಂಗಳವಾರ ರಾತ್ರಿ ಎಲ್ಲ ಶಾಸಕರಿಗೂ ವಾಟ್ಸ್‌ಆ್ಯಪ್‌ ಸಂದೇಶದ ಮೂಲಕ ಆಹ್ವಾನ ಕಳುಹಿಸಲಾಗಿತ್ತು. ಆದರೆ, ಬುಧವಾರ ಬೆಳಿಗ್ಗೆ ಸ್ವತಃ ಮುಖ್ಯಮಂತ್ರಿಯವರಿಂದಲೇ ಸೂಚನೆ ಬಂದ ಕಾರಣ ಭೋಜನ ಕೂಟ ರದ್ದುಪಡಿಸಲಾಯಿತು ಎಂದು ಮೂಲಗಳು ಹೇಳಿವೆ.

ದೆಹಲಿಯಲ್ಲಿ ಪ್ರಧಾನಿಯವರನ್ನು ಭೇಟಿ ಮಾಡಿ ಬಂದ ಯಡಿಯೂರಪ್ಪ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿದೆ ಎಂದು ಮಾಧ್ಯಮಕ್ಕೆ ಹೇಳಿದ್ದರು. ಅದೇ ದಿನ ರಾತ್ರಿ ಅದು ಶಾಸಕಾಂಗ ಪಕ್ಷದ ಸಭೆಯಲ್ಲ, ಶಾಸಕರಿಗೆ ಔತಣ ಕೂಟ ನೀಡಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ ಸ್ಪಷ್ಟನೆ ನೀಡಿತ್ತು.

ಔತಣ ಕೂಟಕ್ಕೆ ಶಾಸಕರನ್ನು ಆಹ್ವಾನಿಸುವಂತೆ ಮುಖ್ಯ ಸಚೇತಕ ವಿ.ಸುನಿಲ್‌ ಕುಮಾರ್‌ ಅವರಿಗೆ  ಯಡಿಯೂರಪ್ಪ ಮಂಗಳವಾರ ಸೂಚಿಸಿದ್ದರು. ಎರಡೆರಡು ಬಾರಿ ಖಚಿತ ಪಡಿಸಿಕೊಂಡ ಬಳಿಕವೇ  ಸುನಿಲ್ ಕುಮಾರ್ ಆಹ್ವಾನವನ್ನು ಕಳುಹಿಸಿದರು. ಆದರೆ, ಬುಧವಾರ ರದ್ದುಪಡಿಸುವಂತೆ ಸೂಚನೆ ಬಂದಿತು ಎಂದು ಮೂಲಗಳು ಹೇಳಿವೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು