ಮಂಗಳವಾರ, ಸೆಪ್ಟೆಂಬರ್ 28, 2021
24 °C

ಬಿಎಸ್‌ವೈ ಭೇಟಿಯಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಭಾನುವಾರ ಭೇಟಿಮಾಡಿ, ಕೆಲಕಾಲ ಚರ್ಚೆ ನಡೆಸಿದ್ದಾರೆ.

ಯಡಿಯೂರಪ್ಪ ಅವರ ನಿವಾಸ ‘ಕಾವೇರಿ’ಗೆ ಬೆಳಿಗ್ಗೆ ಬಂದ ಬೊಮ್ಮಾಯಿ, ಕೆಲವು ನಿಮಿಷಗಳ ಕಾಲ ಚರ್ಚಿಸಿದರು. ಮಾತುಕತೆ ವೇಳೆ ಇತರ ಯಾರೂ ಅವರೊಂದಿಗೆ ಇರಲಿಲ್ಲ.

ಬೊಮ್ಮಾಯಿ ಅವರು ಮಂಗಳವಾರ ದೆಹಲಿಗೆ ತೆರಳಲಿದ್ದಾರೆ. ಸಂಪುಟದಲ್ಲಿ ಖಾಲಿ ಇರುವ ನಾಲ್ಕು ಸ್ಥಾನಗಳನ್ನು ಭರ್ತಿ ಮಾಡುವುದು, ನಿಗಮ, ಮಂಡಳಿಗಳ ನೇಮಕಾತಿ ಸೇರಿದಂತೆ ಹಲವು ವಿಷಯಗಳ ಕುರಿತು ಪಕ್ಷದ ವರಿಷ್ಠರ ಜತೆಗೆ ಮಾತುಕತೆ ನಡೆಸಲು ಸಿದ್ಧತೆ ನಡೆಸಿದ್ದಾರೆ. ಅದಕ್ಕೆ ಪೂರಕವಾಗಿ ಯಡಿಯೂರಪ್ಪ ಅವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದೆಹಲಿ ಪ್ರವಾಸದ ವೇಳೆ ವರಿಷ್ಠರ ಜತೆ ಚರ್ಚಿಸಬೇಕಾದ ವಿಚಾರಗಳು ಮತ್ತು ಕೆಲವು ವಿಷಯಗಳಿಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ತೀರ್ಮಾನಗಳ ಕುರಿತು ಮುಖ್ಯಮಂತ್ರಿಯವರು ಯಡಿಯೂರಪ್ಪ ಅವರಿಂದ ಸಲಹೆ ಪಡೆದಿದ್ದಾರೆ ಎಂದು ಮೂಲಗಳು ಹೇಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು