ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೈಬರ್ ದಾಳಿಯೇ ದೇಶದ ಮುಂದಿರುವ ದೊಡ್ಡ ಸವಾಲು: ಜನರಲ್ ಬಿಪಿನ್ ರಾವತ್

Last Updated 22 ಅಕ್ಟೋಬರ್ 2021, 13:03 IST
ಅಕ್ಷರ ಗಾತ್ರ

ಬೆಂಗಳೂರು: ರಕ್ಷಣಾ ವ್ಯವಸ್ಥೆಯನ್ನು ಸೈಬರ್ ದಾಳಿಯಿಂದ ರಕ್ಷಿಸುವುದೇ ದೇಶದ ಮುಂದಿರುವ ದೊಡ್ಡ ಸವಾಲು ಎಂದು ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹೇಳಿದರು.

1971ರಲ್ಲಿ ಪಾಕಿಸ್ತಾನದ ವಿರುದ್ಧದ ಯುದ್ಧದಲ್ಲಿ ಭಾರತೀಯ ಸೇನೆಯ ಗೆಲುವಿನ ಸುವರ್ಣ ಮಹೋತ್ಸವದ ಪ್ರಯುಕ್ತ ಶುಕ್ರವಾರ ಆರಂಭವಾದ ಮೂರು ದಿನಗಳ ಸಂಭ್ರಮಾಚರಣೆಯ ಉದ್ಘಾಟನಾ ಸಮಾರಂಭ ಯಲಹಂಕದ ಜಕ್ಕೂರು ವಾಯುನೆಲೆಯಲ್ಲಿ ಶುಕ್ರವಾರ ನಡೆಯಿತು. ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.

'ಯಾವುದೇ ಒಂದು ಕ್ಷೇತ್ರದ ಮೇಲೆ ಸೈಬರ್ ದಾಳಿ ನಡೆದರೂ ನಮ್ಮ ಯುದ್ಧ ಸಾಮರ್ಥ್ಯದ ಮೇಲೆ ಪ್ರತಿಕೂಲ ಪರಿಣಾಮ ಆಗುತ್ತದೆ. ರಕ್ಷಣಾ ವ್ಯವಸ್ಥೆ ಸೈಬರ್ ದಾಳಿಗೆ ಸಿಲುಕದಂತೆ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕಿದೆ. ಅದಕ್ಕೆ ಪೂರಕವಾಗಿ ಭೂ ಸೇನೆ, ವಾಯು ಸೇನೆ ಮತ್ತು ನೌಕಾ ದಳಗಳು ಜಂಟಿಯಾಗಿ ಪ್ರಯತ್ನ ಆರಂಭಿಸಿವೆ' ಎಂದರು.

ಬ್ಯಾಂಕಿಂಗ್, ಸಾರಿಗೆ, ಇಂಧನ ಸೇರಿದಂತೆ ಯಾವುದೇ ಕ್ಷೇತ್ರವೂ ಸೈಬರ್ ದಾಳಿಯಿಂದ ತೊಂದರೆಗೆ ಸಿಲುಕಬಾರದು. ಎಲ್ಲ ಕ್ಷೇತ್ರಗಳು ಒಂದಕ್ಕೊಂದು ಪೂರಕವಾಗಿವೆ. ಪ್ರಮುಖ ಕ್ಷೇತ್ರಗಳ ಮೇಲೆ ನಡೆಯುವ ದಾಳಿಯು ಸೇನಾ ಪಡೆಗಳಿಗೂ ಅನಾನುಕೂಲ ಉಂಟುಮಾಡುತ್ತದೆ ಎಂದು ಹೇಳಿದರು.

ಸೇನೆಯಲ್ಲಿ ಮೂರೂ ಪಡೆಗಳ ನಡುವೆ ಪರಸ್ಪರ ಸಂಬಂಧ ವೃದ್ಧಿಸಿ, ಅಂತರ್ ಶಿಸ್ತೀಯ ಥಿಯೇಟರ್ ಕಮಾಂಡ್ ಗಳ ರಚನೆಗೆ ಪ್ರಯತ್ನ ನಡೆಯುತ್ತಿದೆ. ಈ ಸಂಬಂಧ ಈಗಾಗಲೇ ಸಾಕಷ್ಟು ಅಧ್ಯಯನ ನಡೆದಿದೆ. ಭವಿಷ್ಯದ ಸವಾಲುಗಳನ್ನು ಎದುರಿಸಲು ಇಂತಹ ಕಮಾಂಡ್ ರಚನೆ ಅಗತ್ಯ ಎಂದು ರಾವತ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT