ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ ಸ್ಫೋಟ: ದುರಾಡಳಿತಕ್ಕೆ ಕಾರ್ಮಿಕರು ಬಲಿ ಎಂದ ಸಿದ್ದರಾಮಯ್ಯ

Last Updated 23 ಫೆಬ್ರುವರಿ 2021, 5:37 IST
ಅಕ್ಷರ ಗಾತ್ರ

ಬೆಂಗಳೂರು: ಚಿಕ್ಕಬಳ್ಳಾಪುರದ ಜಿಲೆಟಿನ್ ಸ್ಫೋಟ ಆಘಾತಕಾರಿ ದುರ್ಘಟನೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಘಟನೆಗೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಅವರು, ‘ಅಕ್ರಮ ಗಣಿಗಳನ್ನು ಸಕ್ರಮ ಮಾಡಲು ಹೊರಟಿರುವ ಕರ್ನಾಟಕ ಮುಖ್ಯಮಂತ್ರಿಗಳ ದುರಾಡಳಿತಕ್ಕೆ ಅಮಾಯಕ ಕಾರ್ಮಿಕರು ಬಲಿಯಾಗಿದ್ದಾರೆ’ ಎಂದು ಟೀಕಿಸಿದ್ದಾರೆ.

ಶಿವಮೊಗ್ಗದಲ್ಲಿ ಜಿಲೆಟಿನ್ ಸ್ಪೋಟ ನಡೆದ ತಿಂಗಳ ಅವಧಿಯಲ್ಲಿ ನಡೆದ ಚಿಕ್ಕಬಳ್ಳಾಪುರ ಸ್ಫೋಟ ರಾಜ್ಯ ಸರ್ಕಾರದ ನಿಷ್ಕ್ರಿಯತೆ, ಬೇಜವಾಬ್ದಾರಿತನ ಮತ್ತು ಅಕ್ರಮದಲ್ಲಿ ಶಾಮೀಲಾಗಿರುವ ಭ್ರಷ್ಟತನಕ್ಕೆ ಸಾಕ್ಷಿ. ಮುಖ್ಯಮಂತ್ರಿಗಳೇ, ನೀವು ಯಾರನ್ನು ರಕ್ಷಿಸುತ್ತಿದ್ದೀರಿ? ಜನರನ್ನೇ? ಭ್ರಷ್ಟರನ್ನೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಅಮಾಯಕ ಕಾರ್ಮಿಕರ ದುರ್ಮರಣಕ್ಕೆ ಕಾರಣವಾದ ಚಿಕ್ಕಬಳ್ಳಾಪುರದ ಜಿಲೆಟಿನ್ ಸ್ಫೋಟ ಆಘಾತಕಾರಿ ದುರ್ಘಟನೆ. ಮೃತರ ಆತ್ಮಕ್ಕೆ ಶಾಂತಿ ಕೋರುವೆ. ಪ್ರಕರಣದ ತನಿಖೆ ನಡೆಸುವುದರ ಜೊತೆಗೆ ನೊಂದ ಕುಟುಂಬಗಳಿಗೆ ತಕ್ಷಣ ಪರಿಹಾರ ಘೋಷಿಸಬೇಕೆಂದು ಮುಖ್ಯಮಂತ್ರಿಗಳನ್ನು ಒತ್ತಾಯಿಸುವೆ’ ಎಂದುಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ಹಿರೇನಾಗವೇಲಿ ಗ್ರಾಮದ ಬಳಿ ಅಕ್ರಮವಾಗಿ ಜಿಲೆಟಿನ್‌ ಸಾಗಿಸುತ್ತಿದ್ದ ವೇಳೆ ಮಂಗಳವಾರ ಬೆಳಿಗ್ಗೆ ಸ್ಫೋಟ ಸಂಭವಿಸಿದ್ದು, ಆರು ಮಂದಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂರವ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಪೆರೇಸಂದ್ರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT