ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರತಿನಿಧಿಸುವ ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಎಚ್.ಡಿ. ತಮ್ಮಯ್ಯ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವ ಮತ್ತು ಸಂಯೋಜಕ ಸ್ಥಾನಕ್ಕೆ ಗುರುವಾರ ರಾಜೀನಾಮೆ ಸಲ್ಲಿಸಿದ್ದಾರೆ.
‘ಪಕ್ಷದ ಟಿಕೆಟ್ ಕೋರಿ ಒಂದೂವರೆ ತಿಂಗಳ ಹಿಂದೆ ಮನವಿ ಸಲ್ಲಿಸಿದ್ದೆ. ಮನವಿಗೆ ಮುಖಂಡರಿಂದ ಸ್ಪಂದನೆ ಸಿಗಲಿಲ್ಲ. ಹೀಗಾಗಿ, ನೋವಿನಿಂದ ರಾಜೀನಾಮೆ ನೀಡಿದ್ದೇನೆ. ಇದೇ 17ರಂದು ಸ್ನೇಹಿತರು, ಅಭಿಮಾನಿಗಳು, ವಿವಿಧ ಸಮುದಾಯದವರ ಜತೆ ಸಭೆ ನಡೆಸಿ ಮುಂದಿನ ನಡೆ ತೀರ್ಮಾನಿಸುತ್ತೇನೆ’ ಎಂದು ತಮ್ಮಯ್ಯ ತಿಳಿಸಿದ್ದಾರೆ.
ಲಿಂಗಾಯತ ಸಮುದಾಯಕ್ಕೆ ಸೇರಿದ ತಮ್ಮಯ್ಯ ಅವರು ಬಿಜೆಪಿಯಲ್ಲಿ 2007ರಿಂದ ಜಿಲ್ಲಾ ವಕ್ತಾರ ಸಹಿತ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ನಗರಸಭೆ ಅಧ್ಯಕ್ಷರೂ ಆಗಿದ್ದರು.
ತಮ್ಮಯ್ಯ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್‌ನ ಕೆಲ ಮುಖಂಡರನ್ನು ಈಚೆಗೆ ಭೇಟಿಯಾಗಿದ್ದಾರೆ. ಟಿಕೆಟ್ ನಿಟ್ಟಿನಲ್ಲೂ ಚರ್ಚೆ ನಡೆದಿದೆ. ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.