ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೌರಿಬಿದನೂರು ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಆಸ್ಪತ್ರೆ ಸಿಬ್ಬಂದಿಗೆ ನೋಟಿಸ್

ಗೌರಿಬಿದನೂರು ತಾಲ್ಲೂಕು ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ
Last Updated 21 ಮಾರ್ಚ್ 2023, 19:33 IST
ಅಕ್ಷರ ಗಾತ್ರ

ಗೌರಿಬಿದನೂರು: ವೈದ್ಯಕೀಯ ಸಿಬ್ಬಂದಿಯ ನಿರ್ಲಕ್ಷ್ಯದಿಂದ, ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೂರು ವರ್ಷದ ಗಂಡು ಮಗು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ವೈದ್ಯರು ಹಾಗೂ ಮೂವರು ಸಿಬ್ಬಂದಿಗೆ ನೋಟಿಸ್ ನೀಡಲಾಗಿದೆ.

‘ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಸಾವು’ ಎಂಬ ಶೀರ್ಷಿಕೆಯಡಿ ‘ಪ್ರಜಾವಾಣಿ’ ಯಲ್ಲಿ ಸೋಮವಾರ ವರದಿ ಪ್ರಕಟವಾಗಿತ್ತು.

ವರದಿ ಹಿನ್ನೆಲೆಯಲ್ಲಿ ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಶಿವಕುಮಾರ್ ಮಂಗಳವಾರ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರು ಮತ್ತು ಸಿಬ್ಬಂದಿ ಸಭೆ ನಡೆಸಿದರು. ಭಾನುವಾರ ಕರ್ತವ್ಯದಲ್ಲಿದ್ದ ವೈದ್ಯರು, ಸಿಬ್ಬಂದಿಗೆ ತರಾಟೆ ತೆಗೆದುಕೊಂಡರು. ‘ಮುಂದೆ ಇಂತಹ ಘಟನೆ ನಡೆಯದಂತೆ ನಿಗಾವಹಿಸಬೇಕು’ ಎಂದು ಎಚ್ಚರಿಸಿದರು.

‘ಡಾ.ಶಿವಕುಮಾರ್ ಅವರು ವೈದ್ಯರು ಮತ್ತು ಸಿಬ್ಬಂದಿ ಹೇಳಿಕೆಗಳನ್ನು ಪಡೆದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ವರದಿ ಸಲ್ಲಿಸಲಿದ್ದಾರೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಓ.ರತ್ನಮ್ಮ ತಿಳಿಸಿದರು.

‘ಒಂದೆರಡು ದಿನಗಳಲ್ಲಿ ತನಿಖೆ ನಡೆಸಿ ಮಗುವಿನ ಸಾವಿಗೆ ಕಾರಣ ಹುಡುಕುತ್ತೇವೆ. ರೋಗಿಗಳ ಜತೆ ಹೇಗೆ ವರ್ತಿಸುವುದು, ತ್ವರಿತವಾಗಿ ಸೌಲಭ್ಯ ಒದಗಿಸಬೇಕು ಬಗ್ಗೆ ಸಿಬ್ಬಂದಿಗೆ ಮಾಹಿತಿ ನೀಡಲಾಗಿದೆ’ ಎಂದು ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಲಕ್ಷ್ಮಿಕಾಂತ್ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT