ಬುಧವಾರ, ಆಗಸ್ಟ್ 10, 2022
23 °C

ಬಾಲಕಿಯರ ವಿವಾಹವಾದ ಯುವಕರು: ಪ್ರಕರಣ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಲ್ಯವಿವಾಹ–ಪ್ರಾತಿನಿಧಿಕ ಚಿತ್ರ

ದಾವಣಗೆರೆ: ತಂದೆ–ತಾಯಿ ಕಳೆದುಕೊಂಡು ಅನಾಥರಾಗಿರುವ 18 ವರ್ಷದೊಳಗಿನ ಸಹೋದರಿಯರನ್ನು ಪುಸಲಾಯಿಸಿ ವಿವಾಹವಾಗಿದ್ದ ಇಬ್ಬರು ಯುವಕರ ಮೇಲೆ ವಿದ್ಯಾನಗರ ಪೊಲೀಸ್‌ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ.

ಎರಡು ವರ್ಷಗಳ ಹಿಂದೆ ತಂದೆ ಮೃತಪಟ್ಟಿದ್ದರೆ, ಆರು ತಿಂಗಳ ಹಿಂದೆ ತಾಯಿ ಮೃತಪಟ್ಟಿದ್ದರು. ಈ ದಂಪತಿಗೆ ನಾಲ್ವರು ಹೆಣ್ಣುಮಕ್ಕಳು, ಒಬ್ಬ ಮಗ ಇದ್ದಾರೆ. ಈ ಐದು ಮಕ್ಕಳನ್ನು ಕಣ್ಣು ಕಾಣದ ಅಜ್ಜಿ ಸಾಕಿಕೊಂಡಿದ್ದರು.

ಹಿರಿಯವಳಾದ 15 ವರ್ಷದ ಬಾಲಕಿಯನ್ನು ಪರಿಚಯದ ಸ್ಥಳೀಯ ಯುವಕ ಎರಡೂವರೆ ತಿಂಗಳ ಹಿಂದೆ ದೇವಸ್ಥಾನದಲ್ಲಿ ಮದುವೆಯಾಗಿದ್ದ. 13 ವರ್ಷದ ಆಕೆಯ ತಂಗಿಯನ್ನು ಆ ಯುವಕನ ಪಕ್ಕದ ಮನೆಯ ಇನ್ನೊಬ್ಬ ಯುವಕ ವಾರದ ಹಿಂದೆ ಮದುವೆಯಾಗಿದ್ದ.

ಈ ಬಗ್ಗೆ ಮಾಹಿತಿ ಪಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ನೇತೃತ್ವದ ಅಧಿಕಾರಿಗಳ ತಂಡ ಆ ಮನೆಗೆ ಭೇಟಿ ನೀಡಿ ವಿಚಾರಣೆ ನಡೆಸಿದೆ. ಇಬ್ಬರು ಯುವಕರು ಪರಾರಿಯಾಗಿದ್ದಾರೆ.

‘ಐದು ಮಕ್ಕಳನ್ನೂ ಸುಪರ್ದಿಗೆ ತೆಗೆದುಕೊಂಡು, ಬಾಲಮಂದಿರಕ್ಕೆ ಕಳುಹಿಸಿದ್ದೇವೆ. ಯುವಕರ ಮೇಲೆ ಅಪಹರಣ, ಬಾಲ್ಯವಿವಾಹ, ಅತ್ಯಾಚಾರ ಪ್ರಕರಣ ದಾಖಲಿಸಿದ್ದೇವೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಎಚ್.ವಿಜಯ ಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು