ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವಿಧ ಪಕ್ಷಗಳ ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್‌ಗೆ ಸೇರ್ಪಡೆ

ಕಾಂಗ್ರೆಸ್ ಸೇರಿದ ಚಿಂತಾಮಣಿ, ಶಿಗ್ಗಾವಿ, ಕೆ.ಆರ್. ಪೇಟೆ ಕ್ಷೇತ್ರದ ವಿವಿಧ ಪಕ್ಷಗಳ ಮುಖಂಡರು, ಕಾರ್ಯಕರ್ತರು
Last Updated 27 ಮಾರ್ಚ್ 2023, 8:29 IST
ಅಕ್ಷರ ಗಾತ್ರ

ಬೆಂಗಳೂರು: ಚಿಂತಾಮಣಿ, ಶಿಗ್ಗಾವಿ ಮತ್ತು ಕೆ.ಆರ್. ಪೇಟೆ ವಿಧಾನ ಸಭಾ ಕ್ಷೇತ್ರಗಳ ವಿವಿಧ ಪಕ್ಷಗಳ ಹಲವು ಮುಖಂಡರು, ನೂರಾರು ಕಾರ್ಯಕರ್ತರು ಸೋಮವಾರ ಕಾಂಗ್ರೆಸ್ ಸೇರ್ಪಡೆಯಾದರು.

ಮಾಜಿ ಸಂಸದ, ಬಿಜೆಪಿ ನಾಯಕ ಮಂಜುನಾಥ್‌ ಕುನ್ನೂರು ಮತ್ತು ಅವರ ಪುತ್ರ ರಾಜು ಕುನ್ನೂರು ಕೂಡಾ ಕಾಂಗ್ರೆಸ್ ಸೇರಿದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರ ಡಿ.ಕೆ. ಶಿವ ಕುಮಾರ್, ಪ್ರಿಯಾಂಕ್ ಖರ್ಗೆ, ಸಲೀಂ ಅಹ್ಮದ್ ಸೇರಿದಂತೆ ಹಲವರು ಇದ್ದರು.

ಪಕ್ಷ ಸೇರ್ಪಡೆ ಕಾರ್ಯಕ್ರಮ ಎರಡೂವರೆ ಗಂಟೆ ತಡವಾಗಿ ಆರಂಭವಾಯಿತು.

ನೂಕುನುಗ್ಗಲು: ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಯಿತು. ಕೆ.ಆರ್. ಪೇಟೆ, ಶಿಗ್ಗಾಂವಿ ಹಾಗೂ ಚಿಂತಾಮಣಿ ಕ್ಷೇತ್ರಗಳಿಂದ ಬಂದ ವಿವಿಧ ಪಕ್ಷಗಳ ಬೆಂಬಲಿಗರು, ಕಾರ್ಯಕರ್ತರು ಸಭಾಂಗಣ ಒಳಗೆ ಪ್ರವೇಶಿಸುವ ವೇಳೆಯಲ್ಲಿ ಭಾರೀ ನೂಕುನುಗ್ಗಲು ಉಂಟಾಯಿತು. ಕುಳಿತುಕೊಳ್ಳಲು ಹಾಕಿದ್ದ ಖುರ್ಚಿಯನ್ನೇ ಕಾರ್ಯಕರ್ತರು ಕಿತ್ತುಹಾಕಿದ ಘಟನೆ ನಡೆಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT