ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೆ. 4ರಿಂದ ಚಿತ್ಪಾವನ ಸಮಾಜದ ಸುವರ್ಣ ಸಂಭ್ರಮ

Last Updated 1 ಫೆಬ್ರುವರಿ 2023, 16:41 IST
ಅಕ್ಷರ ಗಾತ್ರ

ಬೆಂಗಳೂರು: ಚಿತ್ಪಾವನ ಸಮಾಜದ ವತಿಯಿಂದ ಫೆ. 4 ಮತ್ತು 5ರಂದು ‘ಸುವರ್ಣ ಸಂಭ್ರಮ’ ಕಾರ್ಯಕ್ರಮವನ್ನು ಬಸವನಗುಡಿಯ ಗುರುನರಸಿಂಹ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

‘ಫೆ. 4ರಂದು ಸ್ವಾತಂತ್ರ್ಯ ಯೋಧರ ಚಿತ್ರ ಪ್ರದರ್ಶನದ ಉದ್ಘಾಟನೆ, ಯಕ್ಷಗಾನ ವಿದ್ವಾಂಸ ಪ್ರಭಾಕರ ಜೋಶಿ ಅವರಿಗೆ ಸನ್ಮಾನ, ಆರ್.ಎಸ್. ಮರಾಠೆ ಅವರ ಜೀವನಗಾಥೆ ‘ರಂಗೊಮಾಮ್ಮಾ’ ಪುಸ್ತಕ, ಬೆಂಗಳೂರು ಚಿತ್ಪಾವನ ಸುವರ್ಣ ಭಾವಚಿತ್ರ ಸಂಪುಟ ಮತ್ತು ಚಿತ್ಪಾವನ ಸಮಾಜ ಸುವರ್ಣ ಸ್ಮೃತಿಯನ್ನು ಬಿಡುಗಡೆಗೊಳಿಸಲಾಗುವುದು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಮಾಜದ ಸಾಧಕರಿಗೆ ಸನ್ಮಾನ ಮಾಡಲಾಗುವುದು’ ಎಂದು ಚಿತ್ಪಾವನ ಸಮಾಜದ ಅಧ್ಯಕ್ಷ ಎಂ. ಗಣಪತಿ ಜೋಶಿ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಫೆ. 5ರಂದು ಗೋವಿಂದ ಎನ್. ಫಡಕೆ ಅಧ್ಯಕ್ಷತೆಯಲ್ಲಿ ಕರ್ನಾಟಕ ರಾಜ್ಯದ ಚಿತ್ಪಾವನ ಸಂಘಗಳ ಪದಾಧಿಕಾರಿಗಳ ಸಭೆ ಹಮ್ಮಿಕೊಳ್ಳಲಾಗಿದೆ. ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ನೂಪುರ ತಂಡದವರು ‘ಇದಂ ಬ್ರಾಹ್ಮ್ಯಂ ಇದಂ ಕ್ಷಾತ್ರಂ’ ನಾಟಕ ಪ್ರಸ್ತುತ ಪಡಿಸಲಿದ್ದಾರೆ’ ಎಂದರು.

ಕಾಸರಗೋಡಿನ ಎಡನೀರು ಮಠದ ಸಚ್ಚಿದಾನಂದ ಭಾರತೀ ಶ್ರೀಪಾದ ಸ್ವಾಮೀಜಿ, ಧರ್ಮಸ್ಥಳದ ಧರ್ಮಾಧಿಕಾರಿ ಮತ್ತು ರಾಜ್ಯಸಭಾ ಸದಸ್ಯ ಡಿ. ವೀರೇಂದ್ರ ಹಗ್ಗಡೆ ಅವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT