ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾವತ್‌ ಸಾವು: ಅವಮಾನಕರ ಪೋಸ್ಟ್‌ ಪ್ರಕಟಿಸಿದರೆ ಕಠಿಣ ಕ್ರಮ - ಸಿಎಂ ಬೊಮ್ಮಾಯಿ

Last Updated 10 ಡಿಸೆಂಬರ್ 2021, 10:41 IST
ಅಕ್ಷರ ಗಾತ್ರ

ಬೆಂಗಳೂರು: ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟಿರುವ ಸೇನಾಪಡೆಗಳ ಮುಖ್ಯಸ್ಥ (ಸಿಡಿಎಸ್) ಬಿಪಿನ್ ರಾವತ್ ಸಾವನ್ನು ಸಂಭ್ರಮಿಸುವುದು ಹಾಗೂ ಅವಮಾನಕರ ಪೋಸ್ಟ್ ಪ್ರಕಟಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಎಚ್ಚರಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಬೊಮ್ಮಾಯಿ, 'ಹೆಲಿಕಾಪ್ಟರ್‌ ದುರಂತದಲ್ಲಿ ಸಿಡಿಎಸ್‌ ಜನರಲ್‌ ಬಿಪಿನ್‌ ರಾವತ್‌ ಅವರನ್ನು ಕಳೆದುಕೊಂಡಿದ್ದೇವೆ, ದುರಂತದ ಕುರಿತು ಟ್ವಿಟರ್‌ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಅವಮಾನಕರ ಪೋಸ್ಟ್‌ಗಳನ್ನು ಪ್ರಕಟಿಸುವುದನ್ನು ಸಹಿಸಲು ಸಾಧ್ಯವಿಲ್ಲ. ಅಂಥ ಸಂದೇಶಗಳನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಹಾಗೂ ತಪ್ಪಿತಸ್ತರ ವಿರುದ್ಧ ಕಠಿಣ ಶಿಸ್ತುಕ್ರಮ, ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದೇನೆ. ಅಂಥ ವ್ಯಕ್ತಿಗಳ ವಿರುದ್ಧ ತಕ್ಷಣವೇ ಪ್ರಕರಣ ದಾಖಲಿಸಲಾಗುತ್ತದೆ' ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಪೋಸ್ಟ್‌ಗಳನ್ನು ಹಾಕಿ ಸಂಭ್ರಮಿಸಿದ್ದರು ಎಂದು ವರದಿಯಾಗಿದೆ. ಇದನ್ನು ಖಂಡಿಸಿರುವ ಬೊಮ್ಮಾಯಿ ಕಠಿಣ ಕ್ರಮಕ್ಕೆ ಸೂಚಿಸಿದ್ದಾರೆ.

ಈ ಮೊದಲು ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಬಿಪಿನ್ ರಾವತ್ ಸೇರಿದಂತೆ ಇತರರ ನಿಧನಕ್ಕೆ ಶ್ರದ್ಧಾಂಜಲಿಯನ್ನು ಅರ್ಪಿಸಿದರು. 'ದೇವರು ಬಿಪಿನ್ ರಾವತ್ ಸೇರಿದಂತೆ ಇತರರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಸಾವಿನ ದುಃಖ ಭರಿಸುವ ಶಕ್ತಿಯನ್ನು ಆ ದೇವರು ಅವರ ಕುಟುಂಬದವರಿಗೆ ನೀಡಲಿ. ಓಂ ಶಾಂತಿಃ' ಎಂದು ಸಂತಾಪ ಸೂಚಿಸಿದರು.

'ದೇಶದ ಸೇನಾಪಡೆಗಳ ಮುಖ್ಯಸ್ಥರಾದ ಜನರಲ್ ಬಿಪಿನ್ ರಾವತ್ ಅವರ ನಿಧನದಿಂದ ನಾನು ದಿಗ್ಭ್ರಾಂತನಾಗಿದ್ದೇನೆ. ನಿಜಕ್ಕೂ ಇದು ದುರದೃಷ್ಟಕರ,‌ ಅವರು ಪ್ರಯಾಣಿಸುತ್ತಿದ್ದ ಹೆಲಿಕ್ಯಾಪ್ಟರ್ ಅಪಘಾತಕ್ಕೆ ಈಡಾಗಿರುವುದು ದುರಂತವೇ ಸರಿ. ಅವರ ಜತೆ ಅವರ ಪತ್ನಿ ಮಧುಲಿಕಾ ರಾವತ್ ಸೇರಿದಂತೆ ಇತರೆ 11 ಜನ ಸಾವನ್ನಪ್ಪಿರುವುದು ಹೃದಯ ಕಲುಕುವ ಸಂಗತಿಯಾಗಿದೆ' ಎಂದು ಹೇಳಿದ್ದರು.

ಡಿಸೆಂಬರ್ 8ರಂದು ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರಿನಲ್ಲಿ ಭಾರತೀಯ ವಾಯುಪಡೆಯ ಎಂಐ–17ವಿ5 ಹೆಲಿಕಾಪ್ಟರ್‌ ಪತನಗೊಂಡಿತು. ಈ ದುರಂತದಲ್ಲಿ, ಸೇನಾ ಪಡೆಗಳ ಮುಖ್ಯಸ್ಥ ಜನರಲ್‌ ಬಿಪಿನ್ ರಾವತ್‌ (63), ಅವರ ಪತ್ನಿ ಮಧುಲಿಕಾ, 7 ಅಧಿಕಾರಿಗಳು ಹಾಗೂ ನಾಲ್ವರು ಸಿಬ್ಬಂದಿ ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT