ಗುರುವಾರ , ಜುಲೈ 29, 2021
22 °C

ಬಿ.ಎಸ್‌.ಯಡಿಯೂರಪ್ಪಗೆ ಕ್ರೈಸ್ತ ಸಮುದಾಯದ ಬೆಂಬಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ವೀರಶೈವ–ಲಿಂಗಾಯತ ಮತ್ತು ಇತರ ಸಮುದಾಯ ಮಾತ್ರವಲ್ಲ ಕ್ರೈಸ್ತ ಪಾದ್ರಿಗಳು ಮತ್ತು ಅಖಿಲ ಭಾರತ ಕ್ರೈಸ್ತ ಮಹಾಸಭಾ ಕೂಡ ಬೆಂಬಲ ವ್ಯಕ್ತಪಡಿಸಿದ್ದಾರೆ.

ಮುಂದಿನ ಅವಧಿಯವರೆಗೆ ಯಡಿಯೂರಪ್ಪ ಅವರನ್ನೇ ಮುಂದುವರಿಸಬೇಕು ಎಂದು ಮನವಿ ಪತ್ರವನ್ನು ಬಿಜೆಪಿ ವರಿಷ್ಠರಿಗೆ ಪತ್ರ ಕಳುಹಿಸುವುದಾಗಿ ಹೇಳಿದ್ದಾರೆ. ಕ್ರೈಸ್ತ ಮುಖಂಡರ ನಿಯೋಗವೊಂದು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಬೆಂಬಲ ವ್ಯಕ್ತಪಡಿಸಿದರು.

ಇದನ್ನೂ ಓದಿ... ಇದೇ 26ಕ್ಕೆ ವರಿಷ್ಠರು ನೀಡುವ ಸೂಚನೆ ಪಾಲಿಸಲು ಸಿದ್ಧ: ಬಿಎಸ್‌ವೈ

ಯಡಿಯೂರಪ್ಪ ಅವರು ಯಾವುದೇ ಧರ್ಮ, ಜಾತಿಗಳೆಂಬ ತಾರತಮ್ಯ ಮಾಡದೇ ಎಲ್ಲರ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅದರಲ್ಲೂ ಕ್ರೈಸ್ತರ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ರಾಜ್ಯದಲ್ಲಿ ಶಾಂತಿ,  ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಕೊಡುಗೆ ದೊಡ್ಡದು ಎಂದು ಕ್ರೈಸ್ತ ಸಮುದಾಯದ ಮುಖಂಡರು ಹೇಳಿದರು.

ಇದನ್ನೂ ಓದಿ... ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಪ್ರತಿಕ್ರಿಯೆ ನೀಡದ ಅರುಣ್ ಸಿಂಗ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು