ಗುರುವಾರ , ಅಕ್ಟೋಬರ್ 21, 2021
29 °C

ಕೋವಿಡ್ ನಿರ್ಬಂಧ ಮತ್ತಷ್ಟು ಸಡಿಲಿಕೆ: ಹೊಸ ಮಾರ್ಗಸೂಚಿಯಲ್ಲಿ ಏನೆಲ್ಲಾ ಇವೆ?

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾತ್ರಿ ಕರ್ಫ್ಯೂ ಅವಧಿ ಕಡಿತ, ಚಿತ್ರಮಂದಿರಗಳ ಪೂರ್ಣ ಭರ್ತಿಗೆ ಅವಕಾಶ ಸೇರಿದಂತೆ ಹಲವು ನಿರ್ಬಂಧಗಳನ್ನು ಸಡಿಲಿಕೆ ಮಾಡಿರುವ ರಾಜ್ಯ ಸರ್ಕಾರ ಶುಕ್ರವಾರ ಹೊಸ ಕೋವಿಡ್ ಮಾರ್ಗಸೂಚಿಯನ್ನು ಹೊರಡಿಸಿದೆ.

ಹೊಸ ಮಾರ್ಗಸೂಚಿಯಲ್ಲಿ ಏನೆಲ್ಲಾ ಇವೆ...

* ಅಕ್ಟೋಬರ್‌ 1ರಿಂದ ಚಿತ್ರಮಂದಿರಗಳಲ್ಲಿ ಪೂರ್ಣ ಪ್ರಮಾಣದ ಆಸನಗಳನ್ನು ಭರ್ತಿಗೆ ಅನುಮತಿ

* ರಾತ್ರಿ ಕರ್ಫ್ಯೂ ಅವಧಿ 9ರ ಬದಲು 10ರಿಂದ ಆರಂಭ

 * ಅ.3ರಿಂದ ಪಬ್‌ಗಳೂ ಪುನರಾರಂಭ

* ಕನಿಷ್ಠ ಒಂದು ಡೋಸ್‌ ಕೋವಿಡ್‌ ಲಸಿಕೆ ಪಡೆದವರು ಮಾತ್ರ ಪಬ್‌ಗಳಿಗೆ ಅವಕಾಶ

 * ಗರ್ಭಿಣಿಯರು ಮತ್ತು ಮಕ್ಕಳಿಗೆ ಚಿತ್ರ ಮಂದಿರ ಮತ್ತು ಪಬ್‌ಗಳಿಗೆ ಪ್ರವೇಶ ನಿಷೇಧ.

* ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ದೃಢಪ್ರಮಾಣ ದರದ ಸರಾಸರಿ ಶೇ 0.66 ಇದೆ.

* ದ್ವಿತೀಯ ಪಿಯುಸಿವರೆಗೆ ವಾರದಲ್ಲಿ ಐದು ದಿನ ತರಗತಿ ನಡೆಸಲು ಮತ್ತು ಶೇ 100ರಷ್ಟು ವಿದ್ಯಾರ್ಥಿಗಳಿಗೆ ತರಗತಿಗೆ ಹಾಜರಾಗಲು ಅನುಮತಿ.

* ಕೇರಳ ಮತ್ತು ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಗಳಲ್ಲಿ ಹೆಚ್ಚಿನ ಕಟ್ಟೆಚ್ಚರ ಮುಂದುವರಿಕೆ

* ಯಾದಗಿರಿ, ರಾಯಚೂರು, ಕಲಬುರಗಿ ಮತ್ತು ಮೈಸೂರು ಜಿಲ್ಲೆಯಲ್ಲಿ ಲಸಿಕೆ ವಿತರಣೆಗೆ ಮತ್ತಷ್ಟು ವೇಗ ನೀಡುವಿಕೆ.

ಇದನ್ನೂ ಓದಿ... ಅ.1ರಿಂದ ಚಿತ್ರಮಂದಿರಗಳ ಪೂರ್ಣ ಭರ್ತಿಗೆ ಅವಕಾಶ: ಬಸವರಾಜ ಬೊಮ್ಮಾಯಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು