ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಯಲಲ್ಲೇ ಮೂತ್ರ ವಿಸರ್ಜನೆ: ನಾಗರಿಕರಿಗೆ ಕಿರಿಕಿರಿ

Last Updated 27 ಆಗಸ್ಟ್ 2021, 15:31 IST
ಅಕ್ಷರ ಗಾತ್ರ

ಬೆಂಗಳೂರು: ‘ಸಜ್ಜನ್‌ ರಾವ್‌ ವೃತ್ತದಿಂದ ಮಿನರ್ವ ವೃತ್ತಕ್ಕೆ ಸಾಗುವ ಮಾರ್ಗ ಮಧ್ಯದ ಜನತಾ ಹೋಟೆಲ್‌ ಸಮೀಪದ ಪ್ರದೇಶವು ಬಯಲು ಶೌಚಾಲಯದಂತಾಗಿದೆ. ರಸ್ತೆ ಬದಿಯಲ್ಲೇ ಅನೇಕರು ಮೂತ್ರ ವಿಸರ್ಜನೆ ಮಾಡುವುದರಿಂದ ನಾಗರಿಕರಿಗೆ ಕಿರಿಕಿರಿಯಾಗುತ್ತಿದೆ’ ಎಂದು ಸ್ಥಳೀಯರು ದೂರಿದ್ದಾರೆ.

‘ಜನವಸತಿ ಪ್ರದೇಶದಲ್ಲೇ ತ್ಯಾಜ್ಯ ಹಾಗೂ ವಾಹನಗಳ ಅನಗತ್ಯ ಬಿಡಿಭಾಗಗಳನ್ನು ಸುರಿಯಲಾಗುತ್ತಿದೆ. ಹೀಗಾಗಿ ಅಲ್ಲಲ್ಲಿ ಕಸದ ರಾಶಿ ನಿರ್ಮಾಣವಾಗಿದೆ. ವಾಹನ ಸವಾರರು ಹಾಗೂ ಪಾದಚಾರಿಗಳಿಗೂ ತೊಂದರೆಯಾಗುತ್ತಿದೆ. ಇದಕ್ಕೆ ಕೂಡಲೇ ಕಡಿವಾಣ ಹಾಕಬೇಕು’ ಎಂದು ವಕೀಲರಾದ ಮುರಳೀಧರ ಹಾಗೂ ಅವರ ಸಹೊದ್ಯೋಗಿಗಳು ಒತ್ತಾಯಿಸಿದ್ದಾರೆ.

‘ಈ ಸಮಸ್ಯೆ ಸರಿಪಡಿಸುವಂತೆ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಉದಯ ಬಿ.ಗರುಡಾಚಾರ್‌ ಹಾಗೂ ಬಿಬಿಎಂಪಿ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಮಾಡಲಾಗಿದೆ. ಹೀಗಿದ್ದರೂ ಅವರು ಯಾವುದೇ ಕ್ರಮ ಕೈಗೊಂಡಿಲ್ಲ. ಕೋವಿಡ್‌ ಕಾಲದಲ್ಲಿ ಅಧಿಕಾರಿಗಳು ಸ್ವಚ್ಛತೆಗೆ ಆದ್ಯತೆ ನೀಡದ ಕಾರಣ ಜನರು ಅನಾರೋಗ್ಯದ ಭೀತಿಯಲ್ಲೇ ದಿನ ಕಳೆಯುವಂತಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT