ಬುಧವಾರ, ಮಾರ್ಚ್ 29, 2023
24 °C

ಲಕ್ಷ್ಮಗೌಡ್ ಸೇರಿ ಐವರಿಗೆ ‘ಚಿತ್ರಕಲಾ ಸಮ್ಮಾನ್’ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ಚಿತ್ರಕಲಾ ಪರಿಷತ್ತು ನೀಡುವ ‘ಚಿತ್ರಕಲಾ ಸಮ್ಮಾನ್’ ಪ್ರಶಸ್ತಿಗೆ ಪ್ರೊ.ಕೆ. ಲಕ್ಷ್ಮಗೌಡ್ ಸೇರಿ ಐವರು ಕಲಾವಿದರು ಆಯ್ಕೆಯಾಗಿದ್ದಾರೆ. 

ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪರಿಷತ್ತಿನ ಅಧ್ಯಕ್ಷ ಬಿ.ಎಲ್. ಶಂಕರ್, ‘₹ 1 ಲಕ್ಷ ನಗದು ಬಹುಮಾನ ಹಾಗೂ ಫಲಕವನ್ನು ಒಳಗೊಂಡಿರುವ ‘ಪ್ರೊ.ಎಂ.ಎಸ್. ನಂಜುಂಡರಾವ್ ಪ್ರಶಸ್ತಿ’ಗೆ ತೆಲಂಗಾಣದ ಪ್ರೊ.ಕೆ. ಲಕ್ಷ್ಮಗೌಡ್ ಅವರನ್ನು ಆಯ್ಕೆ ಮಾಡಲಾಗಿದೆ. ‘ಡಿ.ದೇವರಾಜ ಅರಸು ಪ್ರಶಸ್ತಿ’ಗೆ ಶಾಂತಾಮಣಿ ಮುದ್ದಯ್ಯ, ‘ವೈ.ಸುಬ್ರಹ್ಮಣ್ಯರಾಜು ಪ್ರಶಸ್ತಿ’ಗೆ ಕೆ. ವಿಠ್ಠಲ ಭಂಡಾರಿ, ‘ಎಂ.ಆರ್ಯಮೂರ್ತಿ ಪ್ರಶಸ್ತಿ’ಗೆ ಪ್ರೊ. ರಜನಿ ಪ್ರಸನ್ನ ಹಾಗೂ ‘ಎಚ್.ಕೆ.ಕೇಜ್ರಿವಾಲ್ ಪ್ರಶಸ್ತಿ’ಗೆ ಮಾರ್ಥ ಯಾಕಿಮೋವಿಝ್ ಭಾಜನರಾಗಿದ್ದಾರೆ. ಈ ಪ್ರಶಸ್ತಿಗಳು ತಲಾ ₹ 50 ಸಾವಿರ ಮತ್ತು ಫಲಕಗಳನ್ನು ಒಳಗೊಂಡಿವೆ’ ಎಂದು ತಿಳಿಸಿದರು. 

‘ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಇದೇ 7ರಂದು ಸಂಜೆ 4.30ಕ್ಕೆ ಕುಮಾರಕೃಪಾ ರಸ್ತೆಯಲ್ಲಿರುವ ಪರಿಷತ್ತಿನ ಆವರಣದಲ್ಲಿ ನಡೆಯಲಿದೆ. ಬಿಜೆಪಿ ಮುಖಂಡ ಹಾಗೂ ಕರ್ನಾಟಕ ಚಿತ್ರಕಲಾ ಪರಿಷತ್ ಟ್ರಸ್ಟ್‌ ಅಧ್ಯಕ್ಷ ಎಸ್‌.ಎಂ. ಕೃಷ್ಣ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಜಯಕರ್ ಎಸ್‌.ಎಂ. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ’ ಎಂದು ಹೇಳಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು