ಸೋಮವಾರ, ಸೆಪ್ಟೆಂಬರ್ 26, 2022
21 °C

ಶಿವಮೊಗ್ಗ ಚಾಕು ಇರಿತ ಪ್ರಕರಣ; ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ನಗರದಲ್ಲಿ ಸೋಮವಾರ ಮಧ್ಯಾಹ್ನ ಬಟ್ಟೆ ಅಂಗಡಿ ಕಾರ್ಮಿಕ ಪ್ರೇಮ್ ಸಿಂಗ್ (20) ಅವರಿಗೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಪೇಟೆ ಠಾಣೆ ಪೊಲೀಸರು ಇಬ್ಬರನ್ನು ರಾತ್ರಿ ಬಂಧಿಸಿದ್ದಾರೆ.

ಇಲ್ಲಿನ ಜೆ.ಸಿ.ನಗರ ಎರಡನೇ ಕ್ರಾಸ್ ನಿವಾಸಿ ನದೀಮ್ (ನೌಶಾದ್ ಅಲಿ)(25) ಹಾಗೂ ಬುದ್ಧ ನಗರ ಎರಡನೇ ಕ್ರಾಸ್ ನಿವಾಸಿ ಅಬ್ದುಲ್ ರೆಹಮಾನ್ (25) ಬಂಧಿತರು.

ನಗರದ ಕಸ್ತೂರ್‌ ಬಾ ರಸ್ತೆಯಲ್ಲಿರುವ ನಂದಿ ಸಿಲ್ಕ್‌ನಲ್ಲಿ ಕೆಲಸ ಮಾಡುತ್ತಿದ್ದ ಪ್ರೇಮ್‌ ಸಿಂಗ್‌ (20) ಮಧ್ಯಾಹ್ನ   ಅಂಗಡಿ ಬಾಗಿಲು ಹಾಕಿಕೊಂಡು ಗಾಂಧಿ ಬಜಾರ್‌ನ ತರಕಾರಿ ಮಾರುಕಟ್ಟೆಯ ಹತ್ತಿರ ಮನೆಯ ಕಡೆ ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದರು.

ಫ್ಲೆಕ್ಸ್ ವಿವಾದದ ಹಿನ್ನೆಲೆಯಲ್ಲಿ ಸೋಮವಾರ ನಡೆದ ಗಲಾಟೆಯ ಹಿನ್ನೆಲೆಯಲ್ಲಿ ಶಿವಮೊಗ್ಗಕ್ಕೆ ರಾತ್ರಿ ಕಾನೂನು, ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿ, ನಗರದ ವಿವಿಧೆಡೆ ಪರಿಶೀಲನೆ ನಡೆಸಿದರು.

ಇವನ್ನೂ ಓದಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು