ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

1ರಿಂದ 5ರವರೆಗೆ ತರಗತಿ ನಡೆಸಿದರೆ ಕಠಿಣ ಕ್ರಮ: ಸುರೇಶ್ ಕುಮಾರ್

Last Updated 15 ಮಾರ್ಚ್ 2021, 12:00 IST
ಅಕ್ಷರ ಗಾತ್ರ

ಬೆಂಗಳೂರು: ‘ಸರ್ಕಾರದ ಆದೇಶ ಮೀರಿ 1ರಿಂದ 5ರವರೆಗಿನ ತರಗತಿಗಳನ್ನು ನಡೆಸುತ್ತಿರುವ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚಿಸಿದ್ದಾರೆ.

‘ರಾಜ್ಯ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿಯ ನಿರ್ದೇಶನದ ಅನ್ವಯ 6ನೇ ತರಗತಿಯಿಂದ ಮೇಲಿನ ತರಗತಿಗಳನ್ನು ಮಾತ್ರ ಆರಂಭಿಸಲು ಅನುಮತಿ ನೀಡಲಾಗಿದೆ. ಆದರೆ, ರಾಜ್ಯದ ಹಲವೆಡೆ ಕೆಲವು ಖಾಸಗಿ ಶಾಲೆಗಳು 1ರಿಂದ 5ನೇ ತರಗತಿಗಳನ್ನು ಅನಧಿಕೃತವಾಗಿ ನಡೆಸುತ್ತಿರುವ ಕುರಿತು ಮಾಧ್ಯಮಗಳಲ್ಲಿ ವರದಿಗಳು ಬಂದಿವೆ. ಇಂಥ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು’ ಅವರು ಇಲಾಖೆಯ ಅಧಿಕಾರಿಗಳಿಗೆ ಅವರು ನಿರ್ದೇಶನ ನೀಡಿದ್ದಾರೆ.

‘1ರಿಂದ 5ರವರೆಗಿನ ತರಗತಿಗಳನ್ನು ಅನಧಿಕೃತವಾಗಿ ನಡೆಸುತ್ತಿರುವ ಶಿಕ್ಷಣ ಸಂಸ್ಥೆಗಳನ್ನು ಪತ್ತೆ ಹಚ್ಚಿ, ಕಾನೂನು ಕ್ರಮ ಕೈಗೊಳ್ಳಲು ತಾಲ್ಲೂಕು ಮಟ್ಟದಲ್ಲಿ ಪರಿಶೀಲನಾ ತಂಡಗಳನ್ನು ರಚಿಸಿ ತಕ್ಷಣ ಸುತ್ತೋಲೆ ಹೊರಡಿಸಬೇಕು’ ಎಂದೂ ಇಲಾಖೆಯ ಆಯಕ್ತರು ಮತ್ತು ಹೆಚ್ಚುವರಿ ಆಯುಕ್ತರುಗಳಿಗೆ ಸಚಿವರು ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT