ಮೈಸೂರು: ದೇವಾಲಯಗಳನ್ನು ತೆರವು ಮಾಡಿದ್ದು ಸರಿಯಲ್ಲ. ಈ ಬಗ್ಗೆ ಮೊದಲು ಚರ್ಚೆ ಮಾಡಬೇಕಿತ್ತು. ಯಾವುದೇ ಕಾರಣಕ್ಕೂ ದೇಗುಲ ತೆರವು ಮಾಡಬಾರದು ಎಂದು ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಸದ್ಯಕ್ಕೆ ಯಾವುದೇ ಉಪ ಚುನಾವಣೆಯಲ್ಲೂ ಸ್ಪರ್ಧಿಸುವುದಿಲ್ಲ ಹಾಗೂ ಮುಂದೆ ಸ್ಪರ್ಧಿಸುವ ಕ್ಷೇತ್ರವೂ ಅಂತಿಮವಾಗಿಲ್ಲ ಎಂದು ಇಲ್ಲಿ ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.

ವಿಧಾನಸಭಾ ಅಧಿವೇಶನ ಮುಗಿದ ನಂತರ ನಾನು ಮತ್ತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರೂ ಒಟ್ಟಿಗೆ ಮಾಡುವ ಪ್ರವಾಸದ ಕುರಿತು ರೂಪುರೇಷೆ ನಿರ್ಧರಿಸಲಾಗುವುದು ಎಂದು ಹೇಳಿದರು.

ಬಸವರಾಜ ಬೊಮ್ಮಾಯಿ ಉತ್ತಮ ಆಡಳಿತ ನೀಡುತ್ತಿದ್ದಾರೆ. ಮುಂದಿನ ದಿನದಲ್ಲಿ ಇನ್ನು ಉತ್ತಮ ಆಡಳಿತ ನೀಡಲಿದ್ದಾರೆ ಎಂದರು.

ನಂತರ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನಾಚರಣೆ ಪ್ರಯುಕ್ತ ಶಾಸಕ ಎಸ್.ಎ.ರಾಮದಾಸ್ ಕೆ.ಆರ್.ಕ್ಷೇತ್ರದಲ್ಲಿ ಆಯೋಜಿಸಿದ್ದ ಮೋದಿ ಯುಗ್ ಉತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.