ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರ್ಗಿಯಲ್ಲಿ ಹವಾಮಾನ ವೈಪರೀತ್ಯ: ಹೈದರಾಬಾದ್‌ನಲ್ಲಿಳಿದ ಅಲಯನ್ಸ್ ಏರ್ ವಿಮಾನ

Last Updated 16 ಆಗಸ್ಟ್ 2020, 9:58 IST
ಅಕ್ಷರ ಗಾತ್ರ

ಕಲಬುರ್ಗಿ: ಸತತ ಮಳೆ, ಮಂಜಿನಂತಹ ಹವಾಮಾನ ವೈಪರೀತ್ಯದಿಂದಾಗಿ ನಗರಕ್ಕೆ ಬೆಂಗಳೂರಿನಿಂದ ಬಂದಿದ್ದ ಏರ್ ಇಂಡಿಯಾ ಅಂಗ ಸಂಸ್ಥೆ ಅಲಯನ್ಸ್ ಏರ್ ವಿಮಾನ ಹೈದರಾಬಾದ್‌ನಲ್ಲಿ ಇಳಿದಿದೆ.

ಬೆಂಗಳೂರಿನಿಂದ ಬಂದಿದ್ದ ಸ್ಟಾರ್ ಏರ್ ಸಂಸ್ಥೆಯ 50 ಸೀಟುಗಳ ವಿಮಾನ ಲ್ಯಾಂಡ್ ಆಗಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ಇದರಿಂದಾಗಿ ಬೆಂಗಳೂರಿಗೆ ವಾಪಸಾಗಿದೆ.

ಬೆಳಿಗ್ಗೆ ಬೆಂಗಳೂರಿನಿಂದ ಕಲಬುರ್ಗಿಯತ್ತ ಅಲಯನ್ಸ್ ಏರ್‌ನ 72 ಸೀಟುಗಳ ವಿಮಾನ ಹೊರಟಿತ್ತು. ಆದರೆ, ಮೋಡ ಕವಿದ ವಾತಾವರಣ ಮತ್ತು ಜಿಟಿಜಿಟಿ ಮಳೆ ಸುರಿಯುತ್ತಿದ್ದು, ವಿಮಾನ ಲ್ಯಾಂಡ್ ಆಗಲು ಸಾಧ್ಯವಾಗಿಲ್ಲ. ಎಟಿಸಿ ಸಿಗ್ನಲ್ ಸಿಗದೆ ಕೆಲ ಹೊತ್ತು ಆಗಸದಲ್ಲೇ ಸುತ್ತುವರಿದು ಹೈದರಾಬಾದ್‌ಗೆ ತೆರಳಿದೆ. ಅಲ್ಲಿ ವಿಮಾನ ಲ್ಯಾಂಡ್‌ ಆಗಲು ಯಾವುದೇ ವಾತಾವರಣದ ಸಮಸ್ಯೆ ಇಲ್ಲ ಎಂದು ಕಲಬುರ್ಗಿ ವಿಮಾನ ನಿಲ್ದಾಣದ ನಿರ್ದೇಶಕ ಜ್ಞಾನೇಶ್ವರ ರಾವ್ ತಿಳಿಸಿದರು.

ವಿಮಾನ ‌ನಿಲ್ದಾಣ ಆರಂಭವಾಗಿ ಎಂಟು ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಹವಾಮಾನ ವೈಪರೀತ್ಯದ ಕಾರಣಕ್ಕೆ ಎರಡು ವಿಮಾನಗಳು ಇಳಿಯಲು ಸಾಧ್ಯವಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT