ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ಹಲವೆಡೆ ಎರಡು ದಿನ ಮೋಡ ಕವಿದ ವಾತಾವರಣ

Last Updated 3 ಫೆಬ್ರುವರಿ 2023, 18:58 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಶನಿವಾರ ಹಾಗೂ ಭಾನುವಾರ ಮೋಡ ಕವಿದ ಹಾಗೂ ತೀವ್ರ ಚಳಿಯ ವಾತಾವರಣ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ಬಲವಾದ ಮೇಲ್ಮೈ ಸುಳಿಗಾಳಿ ಬೀಸಲಿದೆ. ಬೆಂಗಳೂರಿನಲ್ಲಿ ಗರಿಷ್ಠ 27 ಹಾಗೂ ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ. ‌‌

ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಉಷ್ಣಾಂಶವು ಸಾಮಾನ್ಯಕ್ಕಿಂತ3ರಿಂದ 4 ಡಿಗ್ರಿ ಸೆಲ್ಸಿಯಸ್‌ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಬಾಗಲಕೋಟೆ ಜಿಲ್ಲೆಯಲ್ಲಿ ಶುಕ್ರವಾರ ಕನಿಷ್ಠ ತಾಪಮಾನ 11 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT