ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಇದೇ 21ರಂದು ಸಿ.ಎಂ ವೈಮಾನಿಕ ಸಮೀಕ್ಷೆ

ನಾಲ್ಕು ಜಿಲ್ಲೆಗಳಲ್ಲಿ ಪ್ರವಾಹ ಹಾನಿ ಅಂದಾಜು
Last Updated 19 ಅಕ್ಟೋಬರ್ 2020, 2:05 IST
ಅಕ್ಷರ ಗಾತ್ರ

ಬೆಂಗಳೂರು: ಕಲಬುರ್ಗಿ, ರಾಯಚೂರು, ಬೀದರ್‌ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪ್ರವಾಹದಿಂದ ಉಂಟಾಗಿರುವ ಹಾನಿಯ ವಾಸ್ತವಿಕ ಪ್ರಮಾಣ ಅರಿಯಲು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಇದೇ ಬುಧವಾರ (ಅ.21) ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

ಭಾನುವಾರ ಶಿವಮೊಗ್ಗಕ್ಕೆ ತೆರಳುವ ಮುನ್ನ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ನೆರೆ ಸಂತ್ರಸ್ತರ ಜತೆ ಇಡೀ ಸರ್ಕಾರ ಇದೆ. ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿರುವವರನ್ನು ಸ್ಥಳಾಂತರಿಸುವ ಕೆಲಸವನ್ನು ಆಯಾ ಜಿಲ್ಲಾಡಳಿತ ಮಾಡುತ್ತಿವೆ. ಕಂದಾಯ ಸಚಿವ ಆರ್‌. ಅಶೋಕ ಈಗಾಗಲೇ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ’ ಎಂದರು.

‘ಪ್ರವಾಹದಿಂದ ನಾಲ್ಕು ಜಿಲ್ಲೆಗಳ ನೂರಾರು ಗ್ರಾಮಗಳು ಸಂಪೂರ್ಣ ಮತ್ತು ಭಾಗಶಃ ಮುಳುಗಿವೆ. ಅಗತ್ಯವಿರುವೆಡೆ ಕಾಳಜಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಆಗಿರುವ ಹಾನಿಯ ಸಂಪೂರ್ಣ ಚಿತ್ರಣ ಪಡೆಯಲು ಬುಧವಾರ ವೈಮಾನಿಕ ಸಮೀಕ್ಷೆ ನಡೆಸುತ್ತೇನೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT