ಶುಕ್ರವಾರ, ಮೇ 27, 2022
28 °C

ವಿಧಾನಪರಿಷತ್‌ ಮತ್ತು ರಾಜ್ಯಸಭೆ ಚುನಾವಣೆ: ಬೊಮ್ಮಾಯಿ– ನಳಿನ್‌ ಚರ್ಚೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಧಾನಪರಿಷತ್‌ ಮತ್ತು ರಾಜ್ಯಸಭೆಗಳಿಗೆ ತೆರವಾಗುವ ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜತೆ ಗುರುವಾರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ಅವರು ಚರ್ಚೆ ನಡೆಸಿದರು.

ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ಏಳು ಸ್ಥಾನಗಳು, ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಂದ 4 ಹಾಗೂ ರಾಜ್ಯಸಭೆಯ 4 ಸ್ಥಾನಗಳಿಗೆ ಚುನಾವಣಾ ದಿನಾಂಕಗಳು ಘೋಷಣೆಯಾಗಿವೆ. ಇದರಲ್ಲಿ ಬಿಜೆಪಿ ಎಷ್ಟು ಸ್ಥಾನಗಳನ್ನು ಗೆಲ್ಲಬಹುದು ಮತ್ತು ಯಾರನ್ನೆಲ್ಲ ಕಣಕ್ಕೆ ಇಳಿಸಬಹುದು. ಯಾರ ಹೆಸರುಗಳನ್ನು ವರಿಷ್ಠರಿಗೆ ಕಳುಹಿಸಬಹುದು ಎಂಬ ಬಗ್ಗೆ ಚರ್ಚೆ ನಡೆಯಿತು. ಈ ಬಗ್ಗೆ ಪಕ್ಷದ ಪ್ರಮುಖ ನಾಯಕರ ಸಭೆಯಲ್ಲಿ ಚರ್ಚೆ ನಡೆಸಲು ತೀರ್ಮಾನಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು