ಬೆಂಗಳೂರು: ಉಕ್ರೇನ್‌ನಲ್ಲಿಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ರಷ್ಯಾ ಮತ್ತು ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಸುಮಾರುಭಾರತದ ವಿದ್ಯಾರ್ಥಿಗಳು ವಿಮಾನ ನಿಲ್ದಾಣಕ್ಕೆ ತಲುಪುವಾಗ ಯುದ್ಧ ಪ್ರಾರಂಭವಾಗಿದ್ದರಿಂದ100 ವಿದ್ಯಾರ್ಥಿಗಳು ಎರಡು ಬಸ್‌ಗಳಲ್ಲಿ ಸಿಲುಕಿಕೊಂಡಿದ್ದಾರೆ. ಇವರಲ್ಲಿ 10ಕ್ಕಿಂತ ಹೆಚ್ಚು ಕನ್ನಡಿಗರಿದ್ದು, ಅವರಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲಾಗುತ್ತಿದೆ. ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯೊಂದಿಗೂ ನಿರಂತರ ಸಂಪರ್ಕದಲ್ಲಿರುವುದಾಗಿ ಮುಖ್ಯಮಂತ್ರಿ ತಿಳಿಸಿದರು.

ಉಕ್ರೇನ್‌ನಲ್ಲಿ ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತವಾಗಿರಲು ಭಾರತೀಯ ರಾಯಭಾರ ಕಚೇರಿ ಸೂಕ್ತ ಮಾರ್ಗದರ್ಶನವನ್ನು ನೀಡಿದೆ. ವಿಮಾನಗಳು ಪುನ: ಆರಂಭವಾದಾಗ ವಿದ್ಯಾರ್ಥಿಗಳನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ವಿದೇಶಾಂಗ ಕಾರ್ಯದರ್ಶಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಕೇಂದ್ರ ವಿದೇಶಾಂಗ ಸಚಿವರೊಂದಿಗೂ ಈ ಬಗ್ಗೆ ಚರ್ಚಿಸಲಾಗುವುದು ಎಂದರು.

ಹಲವು ದಿಕ್ಕುಗಳಿಂದ ಉಕ್ರೇನ್ ಗಡಿ ದಾಟಿ ಒಳನುಗ್ಗಿದ ರಷ್ಯಾ ಭೂ ಸೇನೆ

ಉಕ್ರೇನ್‌ನಲ್ಲಿ ಯುದ್ಧದ ಛಾಯೆಯಿಂದಾಗಿ ಕಳೆದ ವಾರವೇ 200 ಭಾರತೀಯರು ಮರಳಿದ್ದರು. ಆಗ ವಿದ್ಯಾರ್ಥಿಗಳಿಗೆ ಮಾಹಿತಿ ಇರಲಿಲ್ಲವೇ ಎಂಬುದಕ್ಕೆ ಪ್ರತಿಕ್ರಿಯಿಸಿ, ವಿದ್ಯಾರ್ಥಿಗಳು ತಂಡಗಳಲ್ಲಿ ಭಾರತಕ್ಕೆ ಮರಳುತ್ತಿದ್ದು, ಈ ತಂಡ ಕಡೆಯದಾಗಿತ್ತು. ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಗುವುದು ಎಂದರು.

ರಷ್ಯಾ–ಉಕ್ರೇನ್ ಸಂಘರ್ಷದ ವಿಚಾರದಲ್ಲಿ ಭಾರತದ ನಿಲುವು ತಟಸ್ಥ: ಕೇಂದ್ರ ಸರ್ಕಾರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.