ಮೈಸೂರು: 'ಮುಂಬರಲಿರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಸಿದ್ದರಾಮಯ್ಯ ಮನೆಗೆ ಹೋಗುವುದು ಖಚಿತ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಇಲ್ಲಿನ ಮಂಡಕಳ್ಳಿ ವಿಮಾನನಿಲ್ದಾಣದಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದರು.
'ನಾವು ಸುಮ್ಮನೆ ಕುಳಿತರೂ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂದು ಅವರು ಹೇಳಿರುವುದನ್ನು ಗಮನಿಸಿದ್ದೇನೆ. ಅವರು ಮನೆಗೆ ಹೋಗುವ ಕಾರ್ಯಕ್ರಮ ಇದೆ. ಹೀಗಾಗಿಯೇ ಅವರು ಅಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ' ಎಂದರು.
'ಗುಜರಾತ್ ಚುನಾವಣೆಯ ನಂತರ ಸಹಜವಾಗಿಯೇ ಕರ್ನಾಟಕದಲ್ಲಿ ಚುನಾವಣೆ ಬಗ್ಗೆ ಚರ್ಚೆಯಾಗುತ್ತಿದೆ. ನಾವು ಸಂಘಟನೆ ದೃಷ್ಟಿಯಿಂದ ಎಲ್ಲ ತಯಾರಿಯನ್ನೂ ನಡೆಸುತ್ತಿದ್ದೇವೆ. ಈ ಬಾರಿ ಹಳೇ ಮೈಸೂರು ಭಾಗದಲ್ಲಿ ಅತಿ ಹೆಚ್ಚಿನ ಸ್ಥಾನಗಳನ್ನು ನಾವು ಗೆಲ್ಲುತ್ತೇವೆ. ಅದಕ್ಕಾಗಿ ಎಲ್ಲ ತಯಾರಿ ನಡೆಸಿದ್ದೇವೆ' ಎಂದು ತಿಳಿಸಿದರು.
'ಅವಧಿಗೆ ಮುನ್ನ ಚುನಾವಣೆ ಬರಲಿದೆಯೇ' ಎಂಬ ಪ್ರಶ್ನೆಗೆ, 'ಇಂಥವೆಲ್ಲ ನಿಮಗೆ ಯಾರು ಹೇಳುತಾರ್ರೀ' ಎಂದು ಗರಂ ಆಗಿ ಪ್ರತಿಕ್ರಿಯಿಸಿ ತೆರಳಿದರು.
ಶಾಸಕ ಎಲ್.ನಾಗೇಂದ್ರ, ಮೇಯರ್ ಶಿವಕುಮಾರ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.