ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇದೇ 14 ರಿಂದ ಹೈಸ್ಕೂಲ್ ಆರಂಭ: ಪಿಯುಸಿ ಸದ್ಯಕ್ಕಿಲ್ಲ- ಮುಖ್ಯಮಂತ್ರಿ

Last Updated 10 ಫೆಬ್ರುವರಿ 2022, 14:18 IST
ಅಕ್ಷರ ಗಾತ್ರ

ಬೆಂಗಳೂರು: ಹಿಜಾಬ್‌ ಮತ್ತು ಕೇಸರಿ ವಿವಾದ ಬಗ್ಗೆ ಗುರುವಾರ ಹೈಕೋರ್ಟ್‌ ಮಧ್ಯಂತರ ಮೌಖಿಕ ಆದೇಶ ಹೊರಬಿದ್ದ ಬೆನ್ನಲ್ಲೇ ಮೊದಲ ಹಂತದಲ್ಲಿ ಇದೇ ಸೋಮವಾರದಿಂದ 8 ರಿಂದ 10 ರವರೆಗಿನ ತರಗತಿಗಳನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದೆ.

ಎರಡನೇ ಹಂತದಲ್ಲಿ ಪಿಯುಸಿ ಮತ್ತು ಪದವಿ ಕಾಲೇಜುಗಳನ್ನು ಆರಂಭಿಸಲಾಗುವುದು. ಆದರೆ ಆ ಬಗ್ಗೆ ದಿನಾಂಕ ನಿರ್ಧರಿಸಿಲ್ಲ. ಸಮಯ ಬಂದಾಗ ಹೇಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಹೈಕೋರ್ಟ್‌ ಮೌಖಿಕ ಆದೇಶದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರು ಶಿಕ್ಷಣ ಮತ್ತು ಗೃಹ ಇಲಾಖೆ ಸಚಿವರು ಮತ್ತು ಅಧಿಕಾರಿಗಳ ತುರ್ತು ಸಭೆ ನಡೆಸಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT