ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಂ ಬೊಮ್ಮಾಯಿ ಇಂದು ದೆಹಲಿಗೆ; ಸಂಪುಟ ವಿಸ್ತರಣೆ ಚರ್ಚೆ ಸಾಧ್ಯತೆ

Last Updated 4 ಏಪ್ರಿಲ್ 2022, 20:21 IST
ಅಕ್ಷರ ಗಾತ್ರ

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯ ಬೇಡಿಕೆಯ ಹೆಚ್ಚುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಮಧ್ಯಾಹ್ನ ನವದೆಹಲಿಗೆ ತೆರಳಲಿದ್ದಾರೆ.

ಮಂಗಳವಾರ ಸಂಜೆ ಅವರು ಕೇಂದ್ರ ಜಲ ಶಕ್ತಿ ಸಚಿವರ ಭೇಟಿಗೆ ಸಮಯ ನಿಗದಿಯಾಗಿದ್ದು, ಮೇಕೆದಾಟು ಯೋಜನೆಯೂ ಸೇರಿ ರಾಜ್ಯದ ವಿವಿಧ ನೀರಾವರಿ ವಿಚಾರ ಸಂಬಂಧ ಅವರು ಮಾತುಕತೆ ನಡೆಸಲಿದ್ದಾರೆ. ಬುಧವಾರವೂ ಕೇಂದ್ರ ಹಲವು ಸಚಿವರನ್ನು ಭೇಟಿಯಾಗಲಿದ್ದು, ಸಮಯ ಇನ್ನಷ್ಟೇ ನಿಗದಿಯಾಗಬೇಕಾಗಿದೆ ಎಂದು ಮೂಲಗಳು ಹೇಳಿವೆ.

ಬುಧವಾರ ಅಥವಾ ಗುರುವಾರ ಅವರು ಪಕ್ಷದ ವರಿಷ್ಠರನ್ನು ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಮಾತುಕತೆ ನಡೆಸಲಿದ್ದಾರೆ. ಅಮಿತ್‌ ಶಾ ಅವರು ಶುಕ್ರವಾರ ಭೇಟಿ ನೀಡಿದ ಸಂದರ್ಭದಲ್ಲಿ ಬೊಮ್ಮಾಯಿ ಅವರ ಜತೆ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ವಿಧಾನಸಭೆ ಚುನಾವಣೆಗೆ ಇನ್ನು ಒಂದು ವರ್ಷ ಬಾಕಿ ಇರುವಾಗಲೇ ಕೆಲವು ಬದಲಾವಣೆಗಳನ್ನು ಮಾಡಲು ವರಿಷ್ಠರು ಬಯಸಿದ್ದಾರೆ ಎಂದು ಮೂಲಗಳು ಹೇಳಿವೆ. ಸದ್ಯಕ್ಕೆ ನಾಲ್ಕು ಸಚಿವರ ಸ್ಥಾನಗಳು ಖಾಲಿ ಇವೆ. ಕೇವಲ ನಾಲ್ಕು ಸ್ಥಾನಗಳನ್ನು ಭರ್ತಿ ಮಾಡಲು ಅನುಮತಿ ಕೊಡುತ್ತಾರೋ ಅಥವಾ ಕೆಲವು ಹಿರಿಯ ಸಚಿವರಿಂದ ರಾಜೀನಾಮೆ ಪಡೆದು ಪುನಾರಚನೆ ಮಾಡುತ್ತಾರೋ ಎಂಬುದನ್ನು ಕಾದು ನೋಡಬೇಕು ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿಯವರು ದೆಹಲಿಯಿಂದ ವಾಪಾಸು ಬರುವ ದಿನಾಂಕ ಮತ್ತು ಸಮಯವನ್ನು ಕಾಯ್ದಿರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT