ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಕಾರ, ಚಾಲಕರ ಮಕ್ಕಳಿಗೂ ವಿದ್ಯಾನಿಧಿ ವಿದ್ಯಾರ್ಥಿ ವೇತನ: ರಾಜ್ಯ ಸರ್ಕಾರ

ವರ್ಷ ಪೂರೈಸಿದ ಬೊಮ್ಮಾಯಿ ಸರ್ಕಾರ: ಜನ ಕಲ್ಯಾಣ ವಿಸ್ತರಣೆ
Last Updated 17 ಡಿಸೆಂಬರ್ 2022, 4:52 IST
ಅಕ್ಷರ ಗಾತ್ರ

ಬೆಂಗಳೂರು: ರೈತರ ಮಕ್ಕಳಿಗೆ ನೀಡುತ್ತಿರುವ ‘ವಿದ್ಯಾನಿಧಿ’ ವಿದ್ಯಾರ್ಥಿ ವೇತನ ಯೋಜನೆಯನ್ನು ನೇಕಾರರು, ಮೀನುಗಾರರು ಮತ್ತು ಟ್ಯಾಕ್ಸಿ ಚಾಲಕರ ಮಕ್ಕಳಿಗೂ ರಾಜ್ಯ ಸರ್ಕಾರ ವಿಸ್ತರಿಸಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸೌಧದಲ್ಲಿ ಗುರುವಾರ ಈ ವಿಷಯ ಪ್ರಕಟಿಸಿದರು. ತಮ್ಮ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯ ಮೂಲಕ ಈ ಅವಧಿಯಲ್ಲಿ ಜಾರಿ ತಂದ ಯೋಜನೆಗಳು ಮತ್ತು ಹೊಸ ಯೋಜನೆಗಳ ಮಾಹಿತಿ ನೀಡಿದರು.

ಪಕ್ಷದ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆಯ ಹಿನ್ನೆಲೆಯಲ್ಲಿ ಸರ್ಕಾರದ ಅಧಿಕೃತ ಕಾರ್ಯಕ್ರಮ ಮತ್ತು ದೊಡ್ಡಬಳ್ಳಾಪುರದಲ್ಲಿ ನಡೆಸಲು ಉದ್ದೇಶಿಸಿದ್ದ ಜನೋತ್ಸವವನ್ನು ರದ್ದುಪಡಿಸಲಾಗಿತ್ತು.

‘ವಿದ್ಯಾನಿಧಿ ಯೋಜನೆಯಡಿ ₹2 ಸಾವಿರದಿಂದ ₹11ಸಾವಿರದವರೆಗೆ ವಿದ್ಯಾರ್ಥಿವೇತನ ಸಿಗಲಿದೆ. ನೇಕಾರರ ಸಮುದಾಯದ 12 ಸಾವಿರ ಮಕ್ಕಳು, ಟ್ಯಾಕ್ಸಿ ಚಾಲನೆ ಮಾಡುವ 50 ಸಾವಿರ ಚಾಲಕರ ಮಕ್ಕಳಿಗೆ ಹಾಗೂ ಮೀನುಗಾರರ ಮಕ್ಕಳಿಗೂ ಯೋಜನೆಯನ್ನು ವಿಸ್ತರಿಸಲಾಗಿದೆ. ಇದಕ್ಕಾಗಿ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಈ ಎಲ್ಲ ಯೋಜನೆಗಳಿಗೆ ಇಂದೇ ಚಾಲನೆ ನೀಡಿದ್ದೇವೆ’ ಎಂದು ಬೊಮ್ಮಾಯಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT