ಮಂಗಳವಾರ, ಸೆಪ್ಟೆಂಬರ್ 21, 2021
22 °C

ಮಹಿಳಾ ಹಾಕಿ ತಂಡದ ಕೋಚ್ ಅಂಕಿತಾಗೆ ಸಿಎಂ ಬೊಮ್ಮಾಯಿ ಸನ್ಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಭಾರತೀಯ ಮಹಿಳಾ ಹಾಕಿ ತಂಡದ ತರಬೇತುದಾರರಲ್ಲಿ ಒಬ್ಬರಾದ ಕೋಚ್ ಅಂಕಿತಾ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸನ್ಮಾನಿಸಿದರು.

‘ಟೋಕಿಯೋ ಒಲಂಪಿಕ್ಸ್‌ ಟೂರ್ನಿಯಲ್ಲಿ ಭಾರತ ಮಹಿಳಾ ಹಾಕಿ ತಂಡ ಅತ್ಯುತ್ತಮ ಪ್ರದರ್ಶನ ತೋರಿದೆ. ಪದಕ‌ ಗೆಲ್ಲಲು ಸಾಧ್ಯವಾಗದಿದ್ದರೂ ಭಾರತೀಯರ ಮನಸ್ಸನ್ನು ಆ ಮಹಿಳಾ ತಂಡ ಗೆದ್ದಿದೆ. ಆ ತಂಡದ ತರಬೇತಿದಾರರಾದ ನಿಮಗೆ ತುಂಬು ಹೃದಯದ ಶುಭಾಶಯ ಕೋರುತ್ತೇನೆ. ಕನ್ನಡದ ಯುವತಿ ಭಾರತ ತಂಡದ ಕೋಚ್ ಆಗಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ’ ಎಂದು ಬೊಮ್ಮಾಯಿ ಹೇಳಿದರು.

‘ಅಂಕಿತಾ ಅವರು ಮಡಿಕೇರಿ ಮೂಲದವರು. ಇವರ ತರಬೇತಿಯಲ್ಲಿ ಪಳಗಿದ ದೇಶದ ಮಹಿಳಾ ಹಾಕಿ ತಂಡ ಬಲಿಷ್ಠವಾಗಿದೆ. ಕಳೆದ ಎರಡು ವರ್ಷಗಳಿಂದ ಭಾರತೀಯ ಮಹಿಳಾ ಹಾಕಿ ತಂಡಕ್ಕೆ ಅಂಕಿತಾ ತರಬೇತಿ ನೀಡುತ್ತಿದ್ದಾರೆ. ಹಲವಾರು ವರ್ಷಗಳ  ಬಳಿಕ ಓಲಂಪಿಕ್ ನಲ್ಲಿ ಮಹಿಳಾ ತಂಡ ಸೆಮಿಫೈನಲ್ ಹಂತಕ್ಕೆ ತಲುಪಿ ಅಭೂತಪೂರ್ವ ಅಮೋಘ ಸಾಧನೆ ಮಾಡಿದೆ. ಒಟ್ಟು ಮೂರು ಜನ ಕೋಚ್‌ಗಳ ಪೈಕಿ ಅಂಕಿತಾ ಒಬ್ಬರು. ಅವರು ಕನ್ನಡಿಗರು ಎಂಬುದು ಶ್ಲಾಘನೀಯ’ ಎಂದು ಸಿಎಂ‌ ಬೊಮ್ಮಾಯಿ ಅಭಿಪ್ರಾಯಪಟ್ಟರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು