ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಜೆಎಂ ಅನುಷ್ಠಾನ ತ್ವರಿತಕ್ಕೆ ಸಿಎಂ ಬೊಮ್ಮಾಯಿ ಸೂಚನೆ

Last Updated 6 ಆಗಸ್ಟ್ 2022, 20:21 IST
ಅಕ್ಷರ ಗಾತ್ರ

ಬೆಂಗಳೂರು: ಜಲ ಜೀವನ್‌ ಮಿಷನ್‌ (ಜೆಜೆಎಂ) ಅಡಿಯಲ್ಲಿ ಅನುಮೋದನೆಯಾಗಿರುವ ಕಾಮಗಾರಿಗಳಿಗೆ ತ್ವರಿತವಾಗಿ ಕಾರ್ಯಾದೇಶ ನೀಡಿ, ಅನುಷ್ಠಾನಆರಂಭಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದರು.

ಶುಕ್ರವಾರ ನಡೆದ ‘ದಿಶಾ’ ರಾಜ್ಯಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಜೆಜೆಎಂ ಅಡಿಯಲ್ಲಿ ದಿನವೊಂದಕ್ಕೆ7,000 ಮನೆಗಳಿಗೆ ನಲ್ಲಿ ಮೂಲಕ ಕುಡಿಯುವ ನೀರು ಸಂಪರ್ಕ ಕಲ್ಪಿಸಲಾಗುತ್ತಿದೆ. ಈ ಯೋಜನೆ ಅನುಷ್ಠಾನದಲ್ಲಿ ವಿಳಂಬ ಆಗದಂತೆ ಎಚ್ಚರಿಕೆ ವಹಿಸಬೇಕು’ ಎಂದರು.

ಕೇಂದ್ರ ಪುರಸ್ಕೃತ ಯೋಜನೆಗಳ ಪೈಕಿ ಕೆಲವು ಯೋಜನೆಗಳ ಅನುಷ್ಠಾನದಲ್ಲಿ ನಿರೀಕ್ಷಿತ ಪ್ರಗತಿ ಆಗಿಲ್ಲ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅನುಷ್ಠಾನದ ಒಟ್ಟು ಸಾಧನೆ ಉತ್ತಮವಾಗಿದೆ. ಆದರೆ, ಕೆಲವು ಜಿಲ್ಲೆಗಳಲ್ಲಿ ಇನ್ನೂ ನಿಗದಿತ ಗುರಿ ತಲುಪಿಲ್ಲ. ಅಂತಹ ಜಿಲ್ಲೆಗಳಿಗೆ ವಿಶೇಷ ಗಮನಹರಿಸಬೇಕು ಎಂದು ಸೂಚಿಸಿದರು.

ಫಸಲ್‌ ಬಿಮಾ ಯೋಜನೆ ಅನುಷ್ಠಾನದಲ್ಲಿ ವಿಮಾ ಕಂಪನಿಗಳ ಕಡೆಯಿಂದ ಇರುವ ನ್ಯೂನತೆಗಳನ್ನು ಸರಿಪಡಿಸಬೇಕು. ಕ್ಲೇಮುಗಳು ಬಾಕಿ ಇರುವ ಪ್ರಕರಣಗಳನ್ನು ವಿಲೇವಾರಿ ಮಾಡಲು ಜಿಲ್ಲಾಧಿಕಾರಿಗಳು ಸಭೆ ನಡೆಸಿ, ಕ್ರಮ ಕೈಗೊಳ್ಳಬೇಕು. ಸಂಸದರ ಆದರ್ಶ ಗ್ರಾಮ ಯೋಜನೆಯ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದರು.

ಪ್ರತಿ ಜಿಲ್ಲೆಯಲ್ಲೂ ಕಡ್ಡಾಯವಾಗಿ ಮೂರು ತಿಂಗಳಿಗೊಮ್ಮೆ ದಿಶಾ ಸಮಿತಿ ಸಭೆ ನಡೆಸಬೇಕು. ಸಮಿತಿಯ ಸದಸ್ಯರು ಕ್ಷೇತ್ರಕ್ಕೆ ಭೇಟಿನೀಡಲು ವ್ಯವಸ್ಥೆ ಮಾಡಬೇಕು ಮತ್ತು ಅವರಿಂದ ವರದಿ ಪಡೆಯಬೇಕು ಎಂದು ಬೊಮ್ಮಾಯಿ ಸೂಚಿಸಿದರು.

ಮಂಡ್ಯ ಸಂಸದೆ ಸುಮಲತಾ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಯೋಜನಾ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT