ಬುಧವಾರ, ಮೇ 25, 2022
26 °C

ಸಿಎಂ ಬೊಮ್ಮಾಯಿ– ನಳಿನ್ ಕುಮಾರ್ ಕಟೀಲ್‌ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ರಾತ್ರಿ ಬಿಜೆಪಿ ಕಚೇರಿಯಲ್ಲಿ ಪಕ್ಷದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಮತ್ತು ಇತರ ಪದಾಧಿಕಾರಿಗಳ ಜತೆಗೆ ಸಭೆ ನಡೆಸಿದರು.

ನಿಗಮ– ಮಂಡಳಿಗಳ ಅಧ್ಯಕ್ಷರನ್ನು ಬದಲಿಸುವ ಬಗ್ಗೆ, ಕೋವಿಡ್‌ ನಿಯಂತ್ರಣ ಮತ್ತು ಗಣರಾಜ್ಯೋತ್ಸವ ಅಚರಣೆಗೆ ಸಂಬಂಧಿಸಿದಂತೆ ಬೊಮ್ಮಾಯಿ ಮಾತುಕತೆ ನಡೆದಿದ್ದಾರೆ ಎಂದು ಮೂಲಗಳು ಹೇಳಿವೆ.

ನಿಗಮ ಮಂಡಳಿಗಳಲ್ಲಿ ಪಕ್ಷದ ಕಾರ್ಯಕರ್ತರಿಗೆ ಆದ್ಯತೆ ನೀಡಲು ಒತ್ತಾಯ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಈ ಮಾತುಕತೆ ಮಹತ್ವ ನಡೆದಿದೆ. ಇದಲ್ಲದೆ ಸಂಪುಟ ಪುನಾರಚನೆ ವಿಚಾರವಾಗಿ ಪಕ್ಷದ ವರಿಷ್ಠರ ಜತೆ ಚರ್ಚಿಸಲು ಸದ್ಯವೇ ದೆಹಲಿಗೆ ಹೋಗಲು ಬೊಮ್ಮಾಯಿ ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಭೆಯಲ್ಲಿ ಪಕ್ಷದ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು