ಶನಿವಾರ, ಏಪ್ರಿಲ್ 1, 2023
32 °C

ಗಂಗಾಮತಸ್ಥರಿಗೆ ST ಮೀಸಲಾತಿ ಸೌಲಭ್ಯ ನೀಡುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ: ಸಿಎಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ‘ಅಂಬಿಗರ ಸಮಾಜಕ್ಕೆ (ಗಂಗಾಮತಸ್ಥರು) ಪರಿಶಿಷ್ಟ ಪಂಗಡದ (ಎಸ್‌ಟಿ) ಮೀಸಲಾತಿ ಸೌಲಭ್ಯ ನೀಡುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಸಮಾಜದ ಬೇಡಿಕೆಯನ್ನು ಈಡೇರಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಹೇಳಿದರು.

ತಾಲ್ಲೂಕಿನ ನರಸೀಪುರದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ 5ನೇ ಶರಣ ಸಂಸ್ಕೃತಿ ಉತ್ಸವ ಉದ್ಘಾಟಿಸಿ ಅವರು ಮಾತನಾಡಿದರು. 

‘ಪರಿಶಿಷ್ಟ ಪಂಗಡದ ಮೀಸಲಾತಿ ಅಡಿ ಪರಿಗಣಿಸಲು ಕೇಂದ್ರ ಸಚಿವ ಅರ್ಜುನ್‌ ಮುಂಡಾ ಅವರನ್ನು ಭೇಟಿ ಮಾಡಿ ಈಗಾಗಲೇ ಚರ್ಚಿಸಲಾಗಿದೆ. ಕೇಂದ್ರದ ಕಾನೂನು ಸಚಿವಾಲಯವು ಕೆಲವು ಸ್ಪಷ್ಟೀಕರಣ ಕೇಳಿದೆ. ಅದನ್ನು ರಾಜ್ಯದಿಂದ ಒದಗಿಸಲಾಗಿದೆ. ಎಲ್ಲ ಪ್ರಕ್ರಿಯೆಗಳು ಅಂತಿಮ ಹಂತದಲ್ಲಿವೆ’ ಎಂದು ತಿಳಿಸಿದರು.

₹5 ಕೋಟಿ ಅನುದಾನ: ‘ಅಂಬಿಗರ ಸಮಾಜದ ಆರ್ಥಿಕ, ಶೈಕ್ಷಣಿಕ, ಧಾರ್ಮಿಕ ಪ್ರಗತಿಗಾಗಿ ಅಂಬಿಗರ ಚೌಡಯ್ಯನವರ ಮಠಕ್ಕೆ ₹10 ಕೋಟಿ ಅನುದಾನ ಘೋಷಿಸಿದ್ದು, ಸದ್ಯ ₹5 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

ಶೀಘ್ರ ಬಾಕಿ ಅನುದಾನವನ್ನು ಬಿಡುಗಡೆ ಮಾಡಲಾಗುವುದು. ಗಂಗಾಮತದ ಜಿಲ್ಲಾ ಸಮುದಾಯ ಭವನಕ್ಕೆ ಈ ಬಜೆಟ್‍ನಲ್ಲಿ ಅನುದಾನ ಒದಗಿಸಲಾಗುವುದು’ ಎಂದು ಭರವಸೆ ನೀಡಿದರು. 

‘ನೀವು ಗಂಗಾ ಮಾತೆಯ ಮಕ್ಕಳು. ನಾನು ಗಂಗಾ ಮಾತೆ ಮಗ. ನನ್ನ ತಾಯಿ ಗಂಗಮ್ಮ. ನಾವೆಲ್ಲರು ಗಂಗಾ ಮಾತೆಯ ಮಕ್ಕಳು. ಸದಾ ಕಾಲ ಗಂಗಾ ಮಾತೆ ಮಗನಾಗಿ ಗಂಗಾಮತಸ್ಥರ ಭಕ್ತನಾಗಿ ಇರುವೆ’ ಎಂದು ಮುಖ್ಯಮಂತ್ರಿ ಇದೇ ಸಂದರ್ಭದಲ್ಲಿ ಭಾವುಕರಾದರು.

ಸಮಾರಂಭದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠದ ಶಾಂತಭೀಷ್ಮಚೌಡಯ್ಯ ಸ್ವಾಮೀಜಿ, ಫಕೀರದಿಂಗಾಲೇಶ್ವರಶ್ರೀ, ಶಾಂತ ಗಂಗಾಧರಶ್ರೀ , ಶರಣಬಸವಶ್ರೀ, ಸಚಿವ ಬಿ.ಸಿ.ಪಾಟೀಲ, ಶಾಸಕರಾದ ನೆಹರು ಓಲೇಕಾರ, ಶ್ರೀನಿವಾಸ ಮಾನೆ, ವಿರೂಪಾಕ್ಷಪ್ಪ ಬಳ್ಳಾರಿ ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು