ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಕದಾಸರ ಅರಮನೆಯಲ್ಲಿ ಧ್ವನಿ-ಬೆಳಕು ಪ್ರದರ್ಶನ: ಅಧಿಕಾರಿಗಳಿಗೆ ಬೊಮ್ಮಾಯಿ ಸೂಚನೆ

ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ
Last Updated 7 ಜುಲೈ 2022, 20:05 IST
ಅಕ್ಷರ ಗಾತ್ರ

ಬೆಂಗಳೂರು: ‘ಸಂತ ಕನಕದಾಸರ ಜನ್ಮಸ್ಥಳ ಬಾಡದಲ್ಲಿ ನಿರ್ಮಿಸಲಾಗಿರುವ ಅರಮನೆಯಲ್ಲಿ ಧ್ವನಿ-ಬೆಳಕು ಪ್ರದರ್ಶನ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಬೇಕು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದರು.

ಗುರುವಾರ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಿದ ಅವರು, ‘ಕನಕದಾಸರ ಅರಮನೆಯು ಸಾವಿರಾರು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಹೀಗಾಗಿ, ಇನ್ನಷ್ಟು ಉತ್ತಮ ಪಡಿಸುವ ನಿಟ್ಟಿನಲ್ಲಿ ಧ್ವನಿ-ಬೆಳಕು ಪ್ರದರ್ಶನ ಪ್ರಾರಂಭಿಸಬೇಕು. ಅತ್ಯುತ್ತಮ ಸಂಸ್ಥೆಗಳ ಮೂಲಕ, ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಬೇಕು’ ಎಂದು ತಿಳಿಸಿದರು.

‘ಅರಮನೆಯಲ್ಲಿ ಕನಕದಾಸರ ಜೀವನ ಕುರಿತು ಅನಿಮೇಷನ್ ಚಿತ್ರ ಪ್ರದರ್ಶಿಸಲಾಗುತ್ತಿದೆ. ಈ ತಂತ್ರಜ್ಞಾನವನ್ನು ಉನ್ನತೀಕರಿಸಿ, 3ಡಿ ಚಿತ್ರ ನಿರ್ಮಿಸಲು ಪ್ರಸ್ತಾವ ಸಲ್ಲಿಸಿ’ ಎಂದು ಸೂಚಿಸಿದರು.

‘ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವ್ಯಾಪ್ತಿಯಲ್ಲಿರುವ ರಾಷ್ಟ್ರೀಯ ಸಂತಕವಿ ಕನಕದಾಸರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರವನ್ನು ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಆಡಳಿತ ವ್ಯಾಪ್ತಿಗೆ ಒಳಪಡಿಸುವ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಿ’ ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಅವರಿಗೆ ಮುಖ್ಯಮಂತ್ರಿ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT