ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಣ್ಣಾಮಲೈ ಊಟ ಮಾಡಿದರೂ, ಉಪವಾಸ ಮಾಡಿದರೂ ಮೇಕೆದಾಟು ನಮ್ಮ ಹಕ್ಕು: ಸಿಎಂ ಬೊಮ್ಮಾಯಿ

Last Updated 31 ಜುಲೈ 2021, 12:34 IST
ಅಕ್ಷರ ಗಾತ್ರ

ನವದೆಹಲಿ: ‘ಕರ್ನಾಟಕದ ಜನರ ನೆರವಿಗಾಗಿ ಮೇಕೆದಾಟು ಯೋಜನೆ ಕೈಗೆತ್ತಿಕೊಂಡು, ಕುಡಿಯುವ ನೀರಿನ ಬವಣೆ ತೀರಿಸುತ್ತೇವೆ. ಯಾರಾದರೂ ಉಪವಾಸ ಕುಳಿತುಕೊಳ್ಳಲಿ, ಊಟವನ್ನಾದರೂ ಮಾಡಲಿ ನಮಗೆ ಸಂಬಂಧವಿಲ್ಲ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಾರವಾಗಿ ನುಡಿದರು.

ಮೇಕೆದಾಟು ಯೋಜನೆಗೆ ಅನುಮತಿ ನೀಡದಂತೆ ಆಗ್ರಹಿಸಿ ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ನಿವೃತ್ತ ಐಪಿಎಸ್‌ ಅಧಿಕಾರಿ ಅಣ್ಣಾಮಲೈ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ‘ಕಾವೇರಿಯ ಹೆಚ್ಚುವರಿ ನೀರನ ಮೇಲೆ ನಮಗೆ ಹಕ್ಕಿದೆ. ನಾವು ಯೋಜನೆ ಕೈಗೆತ್ತಿಕೊಳ್ಳುವುದು ಶತಸಿದ್ಧ’ ಎಂದು ಅವರು ಹೇಳಿದರು.

ಶುಕ್ರವಾರ ಬೆಳಿಗ್ಗೆ ನವದೆಹಲಿಗೆ ಬಂದಿದ್ದ ಮುಖ್ಯಮಂತ್ರಿ ಬೊಮ್ಮಾಯಿ, ಸಚಿವ ಸಂಪುಟದ ವಿಸ್ತರಣೆಗೆ ಸಂಬಂಧಿಸಿದಂತೆ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಚರ್ಚೆ ನಡೆಸಿದ ಬಳಿಕ ಶನಿವಾರ ಮಧ್ಯಾಹ್ನ ಬೆಂಗಳೂರಿಗೆ ತೆರಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT