ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಕೆದಾಟು ಯೋಜನೆ ಅನುಷ್ಠಾನ ಖಚಿತ: ಸಿಎಂ ಬೊಮ್ಮಾಯಿ

Last Updated 15 ಆಗಸ್ಟ್ 2021, 6:14 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದ ನೆಲ, ಜಲ ಮತ್ತು ಭಾಷೆಯ ವಿಚಾರದಲ್ಲಿ ಯಾರೊಂದಿಗೂ ನಾನು ರಾಜಿ ಆಗುವುದಿಲ್ಲ. ಮೇಕೆದಾಟು ಯೋಜನೆಯನ್ನು ಅನುಷ್ಠಾನಕ್ಕೆ ತರುವುದು ಖಚಿತ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ರಾಜ್ಯಕ್ಕೆ ಹಂಚಿಕೆಯಾಗಿರುವ ನೀರಿನ ಪೂರ್ಣ‌ ಪ್ರಮಾಣದ ಬಳಕೆಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ‌. ಕುಡಿಯುವ ನೀರು ಪೂರೈಕೆ ಮತ್ತು ವಿದ್ಯುತ್ ಉತ್ಪಾದನೆಯ ಉದ್ದೇಶಿತ ಮೇಕೆದಾಟು ಸಮಾನಾಂತರ ಅಣೆಕಟ್ಟೆ ನಿರ್ಮಾಣ ಯೋಜನೆಯಿಂದ‌ ಸರ್ಕಾರ ಹಿಂದೆ ಸರಿಯುವುದಿಲ್ಲ ಎಂದು ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಭಾನುವಾರ ನಡೆದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಹೇಳಿದರು.

ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನ ತ್ವರಿತಗೊಳಿಸಲಾಗುವುದು. ಮಹದಾಯಿ ಯೋಜನೆಯನ್ನೂ ಶೀಘ್ರದಲ್ಲಿ ಅನುಷ್ಠಾನಕ್ಕೆ ತರಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

ಅಭಿವೃದ್ಧಿ ಎಂದರೆ ಕೇವಲ ಅಂಕಿಅಂಶ ಅಲ್ಲ. ಎಲ್ಲ ಜನರ ಜೀವನದಲ್ಲಿ ಸುಧಾರಣೆ ತರುವಂತಹ ಅಭಿವೃದ್ಧಿ ಯೋಜನೆಗಳಿಗೆ ತಮ್ಮ ಸರ್ಕಾರ ಆದ್ಯತೆ ನೀಡಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT