ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೋಟೊ, ವಿಡಿಯೊಗಳ ನಿಷೇಧದ ಆದೇಶ ನನ್ನ ಗಮನಕ್ಕೆ ಬಂದಿರಲಿಲ್ಲ: ಸಿಎಂ ಬೊಮ್ಮಾಯಿ

Last Updated 16 ಜುಲೈ 2022, 4:54 IST
ಅಕ್ಷರ ಗಾತ್ರ

ಬೆಂಗಳೂರು:‘ಸರ್ಕಾರಿ ಕಚೇರಿಗಳಲ್ಲಿ ಫೋಟೊ, ವಿಡಿಯೊ ಮಾಡದಂತೆ ಹೊರಡಿಸಿದ್ದ ಆದೇಶದ ಬಗ್ಗೆ ನನ್ನ ಗಮನಕ್ಕೆ ಬಂದಿರಲಿಲ್ಲ. ಯಾವುದೇ ರೀತಿಯ ನಿಷೇಧ ಆಗಬಾರದು, ಮೊದಲು ಇದ್ದಂತೆ ಇರಲಿ ಎಂಬ ಕಾರಣಕ್ಕೆ ಈ ಆದೇಶವನ್ನು ವಾಪಸು ಪಡೆಯುವ ತಾತ್ವಿಕ ತೀರ್ಮಾನ ತೆಗೆದುಕೊಂಡಿದ್ದೇವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ನಮ್ಮ ಸರ್ಕಾರ ಪಾರದರ್ಶಕವಾಗಿ ನಡೆಯುತ್ತಿದೆ. ನಾವು ಯಾವುದನ್ನೂ ಮುಚ್ಚಿಡುವುದಿಲ್ಲ. ಯಾರು ಏನೇ ಹೇಳಿಕೊಳ್ಳಲಿ’ ಎಂದರು.

‘ಕೆಲವು ಸರ್ಕಾರಿ ನೌಕರರು ಸರ್ಕಾರಿ ಕಚೇರಿಗಳಲ್ಲಿಫೋಟೊ, ವಿಡಿಯೊ ಮಾಡದಂತೆ ಬಹಳ ದಿನಗಳಿಂದ ಹೇಳುತ್ತಿದ್ದರು. ಅವರು ಹೇಳುವುದರಲ್ಲೂ ಅರ್ಥವಿದೆ. ಕೆಲವು ಹೆಣ್ಣು ಮಕ್ಕಳಫೋಟೊ ತೆಗೆದು ತೊಂದರೆ ಆಗಿತ್ತು’ ಎಂದೂ ಮುಖ್ಯಮಂತ್ರಿ ಹೇಳಿದರು.

28ರಂದು ದೊಡ್ಡಬಳ್ಳಾಪುರದಲ್ಲಿ ರ‍್ಯಾಲಿ:‘ನನ್ನ ನೇತೃತ್ವದ ಸರ್ಕಾರಕ್ಕೆ ಒಂದು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಇದೇ 28ರಂದು ಪಕ್ಷದ ವತಿಯಿಂದ ದೊಡ್ಡಬಳ್ಳಾಪುರದಲ್ಲಿ ವಿಶೇಷ ರ‍್ಯಾಲಿ ಆಯೋಜಿಸಲು ನಿರ್ಧರಿಸಿದ್ದೇವೆ. ಸರ್ಕಾರದ ಕಾರ್ಯಕ್ರಮ ಬೆಂಗಳೂರಿನಲ್ಲಿ, ಪಕ್ಷದ ಕಾರ್ಯಕ್ರಮ, ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ’ ಎಂದರು.

‘ನಮ್ಮ ಸಚಿವ ಸಂಪುಟದಎಲ್ಲ ಸಚಿವರು ಚಿಂತನಾ ಸಭೆ ಮಾಡಿದ್ದೇವೆ. ಈ ಸಭೆಯಲ್ಲಿ ಯಾವ ರೀತಿ ಮುಂದಿನ ದಿನಗಳಲ್ಲಿ ಸರ್ಕಾರ ಮತ್ತು ಪಕ್ಷ ಸಮನ್ವಯವಾಗಿ ಮುಂದೆ ಹೋಗಬೇಕು, ಕೇಂದ್ರ ಮತ್ತು ರಾಜ್ಯ ಸರ್ಕಾರ ಮಾಡಿರುವ ಕಾರ್ಯಕ್ರಮಗಳನ್ನು ಮನೆ ಮನೆಗೆ ತಲುಪಿಸಲು ಅಭಿಯಾನ ಕೈಗೊಳ್ಳಲು ತೀರ್ಮಾನಿಸಿದ್ದೇವೆ’ ಎಂದರು.

‘ಅಲ್ಲದೆ, ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೂ ಮಾತನಾಡಿ, ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ಕೊಟ್ಟಿದ್ದೇನೆ. ಆಶ್ರಯ ಕೇಂದ್ರಗಳನ್ನು ಕೂಡಲೇ ತೆರೆಯಲು, ಬೆಳೆ ನಾಶದ ಸಮೀಕ್ಷೆ ಕೈಗೊಳ್ಳಲು ನಿರ್ದೇಶನ ನೀಡಿದ್ದೇನೆ‘ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT