ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಡಿಆರ್‌ಎಫ್‌ನಿಂದ ಅಗತ್ಯ ನೆರವು: ಬೊಮ್ಮಾಯಿ ವಿಶ್ವಾಸ

Last Updated 4 ಸೆಪ್ಟೆಂಬರ್ 2021, 7:02 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಗೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (ಎನ್‌ಡಿಆರ್‌ಎಫ್‌) ಅಗತ್ಯ ನೆರವು ಸಿಗಲಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

ಆರ್‌.ಟಿ. ನಗರದಲ್ಲಿರುವ ತಮ್ಮ ನಿವಾಸದ ಬಳಿ ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು ‘ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿ ಅಧ್ಯಯನ ನಡೆಲು ಬಂದಿರುವ ಕೇಂದ್ರ ಅಧ್ಯಯನ ತಂಡದ ಜೊತೆ ಸಚಿವ ಸಂಪುಟ ಸಭೆಯ ಬಳಿಕ ಪೂರ್ವಭಾವಿ ಚರ್ಚೆ ನಡೆಸಲಾಗುವುದು’ ಎಂದರು.

‘ಕೇಂದ್ರ ತಂಡ ಹಾನಿಗೊಳಗಾದ ಪ್ರದೇಶಗಳನ್ನು ವೀಕ್ಷಿಸಿದ ಬಳಿಕ ಉಂಟಾಗಿರುವ ನಷ್ಟದ ಬಗ್ಗೆ ಅಂತಿಮ ಸಭೆ ನಡೆಸಲಾಗುವುದು. ನಷ್ಟದ ಬಗ್ಗೆ ತಂಡದ ಸದಸ್ಯರಿಗೆ ಮನವರಿಕೆ ಮಾಡಿಕೊಡಲಾಗುವುದು. ತಂಡದೊಂದಿಗೆ ಅಧಿಕಾರಿಗಳು ಪ್ರವಾಸ ಮಾಡಲಿದ್ದು ಎಲ್ಲಿ ಅತಿ ಹೆಚ್ಚು ಹಾನಿಯಾಗಿದೆ ಅಲ್ಲಿ ಭೇಟಿ ನೀಡಿ ವರದಿ ನೀಡಲಿದ್ದಾರೆ’ ಎಂದರು.

‘ಸದ್ಯ 6, 7 ಮತ್ತು 8ನೇ ತರಗತಿ ಆರಂಭಿಸಲು ತೀರ್ಮಾನಿಸಿದ್ದೇವೆ. ಪರಿಸ್ಥಿತಿ ಅವಲೋಕಿಸಿ 1 ರಿಂದ 5ನೇ ತರಗತಿ ಆರಂಭಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಸದ್ಯ ಈ ಬಗ್ಗೆ ಯಾವುದೇ ಚರ್ಚೆ ಮಾಡಿಲ್ಲ. ರ‍್ಯಾಲಿ, ಚುನಾವಣೆ, ಸಭೆ ಸಮಾರಂಭಗಳಲ್ಲಿ ಹೆಚ್ಚು ಜನ ಸೇರುವ ಸಂಬಂಧ ಮಾರ್ಗಸೂಚಿ ಹೊರಡಿಸಲಾಗುವುದು’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT