ಸೋಮವಾರ, ಜನವರಿ 17, 2022
19 °C

ಮೇಕೆದಾಟು ಯೋಜನೆ ಸಾಕಾರಗೊಳಿಸಲು ಬದ್ಧ: ಸಿಎಂ ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೇಕೆದಾಟು ವಿಚಾರದಲ್ಲಿ ಎಲ್ಲ ರಾಜಕೀಯ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯೋಜನೆಯನ್ನು ಸಾಕಾರಗೊಳಿಸಲು ರಾಜ್ಯ ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

'ಕರ್ನಾಟಕದ ನೆಲ, ಜಲ ಹಾಗೂ ಜನರ ಬಗ್ಗೆ ಯಾವಾಗಲೂ ಕೂಡ ಎಲ್ಲ ರಾಜಕೀಯ ಪಕ್ಷಗಳು ಒಂದಾಗಿ ಕೆಲಸ ಮಾಡಿದ್ದಾವೆ.
ಮೇಕೆದಾಟು ವಿಚಾರದಲ್ಲಿ ಕೂಡಾ ಎಲ್ಲ ರಾಜಕೀಯ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯೋಜನೆಯನ್ನು ಸಾಕಾರಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ' ಎಂದು ಸಿಎಂ ಬೊಮ್ಮಾಯಿ ಟ್ವೀಟ್‌ ಮಾಡಿದ್ದಾರೆ.

ಈಗ ಕೋವಿಡ್ ಮಹಾಮಾರಿ 3ನೇ ಅಲೆ ಕರ್ನಾಟಕ ರಾಜ್ಯಕ್ಕೆ ಹಾಗೂ ವಿಶೇಷವಾಗಿ ಬೆಂಗಳೂರಿಗೆ ಆವರಿಸಿಕೊಂಡಿದೆ. ಈ ಸಂದರ್ಭದಲ್ಲಿ ಕರ್ನಾಟಕ ಮತ್ತು ಬೆಂಗಳೂರು ಜನರ ಆರೋಗ್ಯ ಕಾಪಾಡುವುದು ನಮ್ಮೆಲ್ಲರ ಪ್ರಥಮ ಕರ್ತವ್ಯ ಆಗಿದೆ. ಹೀಗಾಗಿ ಈ ಕರ್ತವ್ಯವನ್ನು ನಿರ್ವಹಿಸಲು ಬದ್ಧತೆ ತೋರಿಸಬೇಕಾಗಿದೆ.

ಕೋವಿಡ್ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸುವ ಕಾನೂನನ್ನು ಉಲ್ಲಂಘನೆ ಮಾಡದೇ ಎಲ್ಲರ ಸಹಕಾರವನ್ನು ಬಯಸುತ್ತೇನೆ. ಈ ಸಾಂಕ್ರಾಮಿಕ ರೋಗವನ್ನು ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ನಿಯಂತ್ರಿಸಲು ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳಲು ಸರಕಾರ ತೀರ್ಮಾನಿಸಿದೆ ಎಂದು ಬೊಮ್ಮಾಯಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಮೇಕೆದಾಟು ಪಾದಯಾತ್ರೆ ತಡೆಯಲು ರಾಜ್ಯ ಸರಕಾರ ಅಸಮರ್ಥವೇ ಎಂದು ಹೈಕೋರ್ಟ್‌ ಚಾಟಿ ಬೀಸಿದ ಬೆನ್ನಲ್ಲೇ ಪಾದಯಾತ್ರೆಯನ್ನು ನಿಷೇಧಗೊಳಿಸಲಾಗಿದೆ. ಪಾದಯಾತ್ರೆಯನ್ನು ಪೂರ್ಣಗೊಳಿಸಿಯೇ ತೀರುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಠ ತೊಟ್ಟಿದ್ದಾರೆ. ಈ ಹಿನ್ನೆಲೆ ಗುರುವಾರದ ಪಾದಯಾತ್ರೆ ಭಾರಿ ಕುತೂಹಲಕ್ಕೆ ಕಾರಣವಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು