ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆ ಹಾನಿ ಪರಿಹಾರ ಕ್ರಮಕ್ಕೆ ಹಣದ ಕೊರತೆಯಿಲ್ಲ: ಸಿ.ಎಂ

Last Updated 12 ಜುಲೈ 2022, 5:36 IST
ಅಕ್ಷರ ಗಾತ್ರ

ಮೈಸೂರು: 'ಮಳೆಯಿಂದ ಪ್ರಾಣಹಾನಿ, ಭೂ ಕುಸಿತ , ಬೆಳೆಹಾನಿ ಉಂಟಾಗಿದ್ದು, ಸಮೀಕ್ಷೆ ಹಾಗೂ ಪರಿಹಾರ ಕಾರ್ಯ ಭರದಿಂದ ಸಾಗಿದೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಕೊಡಗು, ಕರಾವಳಿ ಜಿಲ್ಲೆಗಳ ಪ್ರವಾಸ ಕೈಗೊಳ್ಳಲು ಮಂಗಳವಾರ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

'ಕೇಂದ್ರ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ₹ 739 ಕೋಟಿ ಬಿಡುಗಡೆಯಾಗಿದೆ. ಪರಿಹಾರ ಕ್ರಮಕ್ಕೆ ಹಣದ ಕೊರತೆಯಿಲ್ಲ. ನದಿ ಪಾತ್ರದಲ್ಲಿ ಸಂಭವಿಸುವ ಪ್ರವಾಹ ಹಾನಿ ತಡೆಗೆ ಶಾಶ್ವತ ಪರಿಹಾರಕ್ಕಾಗಿ‌ ಹಾಗೂ ಮನೆಗಳನ್ನು ಸ್ಥಳಾಂತರಿಸಲು ತಜ್ಞರ ಅಭಿಪ್ರಾಯ ಕೇಳಲಾಗಿದೆ' ಎಂದರು.

'ಈ ಬಾರಿಯ ಮಳೆಗಾಲದಲ್ಲಿ ಹಲವು ಕಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಭೂ ಕುಸಿತವುಂಟಾಗಿದೆ. ಕೊಡಗಿನಲ್ಲಿ ಲಘು ಭೂಕಂಪ,‌ ಕರಾವಳಿಯಲ್ಲಿ ಕಡಲ ಕೊರೆತ ಹಾಗೂ ಉತ್ತರ ಕರ್ನಾಟಕದ ನದಿ ಪಾತ್ರಗಳಲ್ಲಿ ಪ್ರವಾಹ ಹಾನಿಯಾಗಿದೆ‌. ಭೂ ಕುಸಿತ ಸಂಭವಿಸುತ್ತಿರುವ ಸೂಕ್ಷ್ಮ ಪ್ರದೇಶಗಳಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಲ್ಲಿ ನೆಲೆಸುವಂತೆ ಮಾಡಲು ಮನವೊಲಿಸಲಾಗುವುದು' ಎಂದು ತಿಳಿಸಿದರು.

'ಉಡುಪಿ, ಮಂಗಳೂರು, ಕೊಡಗು ಹಾಗೂ ಉತ್ತರ ಕನ್ನಡ ಸೇರಿದಂತೆ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಇಡೀ ಸರ್ಕಾರ ಮಳೆಹಾನಿ, ಪ್ರವಾಹ ಪ್ರದೇಶಗಳಿಗೆ ಭೇಟಿ ನೀಡುತ್ತಿದೆ.‌ ವಿಪತ್ತು ಸಂಭವಿಸುತ್ತಿದ್ದರೂ ಸರ್ಕಾರ ಸಕ್ರಿಯವಾಗಿಲ್ಲವೆಂಬುದು ಸುಳ್ಳು' ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

'ನಿಗಮ ಮಂಡಳಿಯಲ್ಲಿ ಒಂದೂವರೆ ವರ್ಷ ಸೇವೆ ಸಲ್ಲಿಸಿದವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಲು ಈಗಾಗಲೇ ತೀರ್ಮಾನ ಮಾಡಲಾಗಿದ್ದು, ಪಟ್ಟಿಯನ್ನೂ ಸಿದ್ಧಪಡಿಸಲಾಗಿದೆ' ಎಂದೂ ಅವರು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪ ಸಿಂಹ, ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT