ಗುರುವಾರ , ಜುಲೈ 7, 2022
23 °C

ಶಸ್ತ್ರಚಿಕಿತ್ಸೆಗಾಗಿ ಸಿ.ಎಂ ವಿದೇಶಕ್ಕೆ ಹೋಗುವುದಿಲ್ಲ: ಆರ್‌. ಅಶೋಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ವಿದೇಶಕ್ಕೆ ಹೋಗಲಿದ್ದಾರೆ ಎನ್ನುವುದು ಸುಳ್ಳು ಸುದ್ದಿ’ ಎಂದು ಕಂದಾಯ ಸಚಿವ ತಿಳಿಸಿದರು.

ಸುದ್ದಿಗಾರರ ಜೊತೆ ಶುಕ್ರವಾರ ಮಾತನಾಡಿದ ಅವರು, ‘ಮುಖ್ಯಮಂತ್ರಿಯವರು ಚಿಕಿತ್ಸೆಗೆ ವಿದೇಶಕ್ಕೆ ಹೋಗುವ ಕಾರ್ಯಕ್ರಮ ಇಲ್ಲ. ಶಸ್ತ್ರಚಿಕಿತ್ಸೆ ಕೂಡಾ ಮಾಡಿಸಿಕೊಳ್ಳುತ್ತಿಲ್ಲ. ಯಾರೋ ವದಂತಿ ಹಬ್ಬಿಸಿದ್ದಾರೆ ಅಷ್ಟೆ’
ಎಂದರು.

‘ಬೊಮ್ಮಾಯಿ ಅವರು ಶಸ್ತ್ರಚಿಕಿತ್ಸೆ ಇಲ್ಲದೆ ಗುಣಮುಖರಾಗಲು ಅಗತ್ಯವಾದ ಚಿಕಿತ್ಸೆಯನ್ನು ಇಲ್ಲಿಯೇ ಪಡೆಯಲಿದ್ದಾರೆ. ಮೂಳೆ ರೋಗ ತಜ್ಞರು ಮತ್ತು ಆಯುರ್ವೇದಿಕ್‌ ತಜ್ಞರು ಈ ಬಗ್ಗೆ ಸಲಹೆ ಕೊಟ್ಟಿದ್ದಾರೆ. ಫಿಜಿಯೋ ಥೆರಪಿ ಚಿಕಿತ್ಸೆ ಪಡೆಯಲಿದ್ದಾರೆ. ಮುಂದಿನ ಚುನಾವಣೆಯನ್ನು ಅವರ ನೇತೃತ್ವದಲ್ಲಿಯೇ ಎದುರಿಸುತ್ತೇವೆ’ ಎಂದೂ ಅಶೋಕ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು