ಗುರುವಾರ , ಜುಲೈ 7, 2022
23 °C

ತಮಿಳುನಾಡು ನಿರ್ಣಯ: ಬೊಮ್ಮಾಯಿ ಖಂಡನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ತಮಿಳುನಾಡು ವಿಧಾನಸಭೆ ಸೋಮವಾರ ಮೇಕೆದಾಟು ಯೋಜನೆ ವಿರುದ್ಧ ಕೈಗೊಂಡಿರುವ ನಿರ್ಣಯ ಕಾನೂನು ಬಾಹಿರವಾಗಿದ್ದು, ಇದನ್ನು ಕರ್ನಾಟಕ ಖಂಡಿಸುತ್ತದೆ ಮತ್ತು ಮೇಕೆದಾಟು ಯೋಜನೆ ನಿರ್ಮಾಣಕ್ಕೆ ಬದ್ಧರಾಗಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್‌ ಮಾಡಿರುವ ಅವರು,  ಒಂದು ರಾಜ್ಯ ಇನ್ನೊಂದು ರಾಜ್ಯದ ಹಕ್ಕನ್ನು ಆಕ್ರಮಿಸಿಕೊಳ್ಳುವಂತಹ ಜನ ವಿರೋಧಿ ನಿರ್ಣಯ ಇದಾಗಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ತಮಿಳುನಾಡಿಗೆ ನಂಬಿಕೆ ಇಲ್ಲದ ನಿರ್ಣಯ ಇದಾಗಿದೆ ಎಂದಿದ್ದಾರೆ.

ಮೇಕೆದಾಟು ಯೋಜನೆ ರಾಜ್ಯದಲ್ಲಿ ಹುಟ್ಟುವ ಕಾವೇರಿ ನದಿಗೆ ಸಂಬಂಧಿಸಿದ್ದಾಗಿದೆ. ಕಾವೇರಿ ನ್ಯಾಯಾಧಿಕರಣ ಅನ್ವಯ ತಮಿಳುನಾಡಿಗೆ 177.25 ಟಿಎಂಸಿ ನೀರನ್ನು ಕೊಟ್ಟ ನಂತರ ಉಳಿದ ನೀರಿನ ಮೇಲೆ ಕರ್ನಾಟಕದ ಹಕ್ಕು ಇದೆ. ತಮಿಳುನಾಡಿನ ಈ ರಾಜಕೀಯ ನಿರ್ಧಾರವನ್ನು ಲೆಕ್ಕಿಸದೇ ಮೇಕೆದಾಟು ಯೋಜನೆ ಕೈಗೆತ್ತಿಕೊಳ್ಳಲು ಸರ್ಕಾರ ಎಲ್ಲ ರೀತಿಯ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು